Sunday, August 9, 2026

ಮುದ್ರಾಡಿ : ಮಾದಕ ದ್ರವ್ಯ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ದೂರವಿದ್ದು ಸೈಬರ್ ಕ್ರೈಂ ಬಗ್ಗೆ ಎಚ್ಚರಿಕೆಯಿಂದಿರಿ. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ. ನಿಮ್ಮ ಭವಿಷ್ಯಕ್ಕೆ ಮಾರಕವಾಗುವ ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಜ್ಞಾನ ಸಂಪಾದನೆಗೆ ನಿಮ್ಮ ಸಮಯವನ್ನು ಮೀಸಲಿಟ್ಟು ಉನ್ನತ ಸ್ಥಾನಮಾನವನ್ನು ನಿಮ್ಮದಾಗಿಸಿಕೊಳ್ಳಿ ಎಂದು ಹೆಬ್ರಿ ಪೊಲೀಸ್ ಠಾಣೆಯ ಸಬ್‌ ಇನ್ಸ್‌ ಫೆಕ್ಟರ್ ಚಂದ್ರ ಎ. ಕೆ. ಹೇಳಿದರು.

ಅವರು ಮುದ್ರಾಡಿ ಎಂಎನ್ ಡಿ ಎಸ್ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ಮಾದಕ ವಸ್ತುಗಳ ಸೇವನೆಯ ವಿರುದ್ಧ ನಡೆದ ಜಾಗೃತಿ ಕಾರ್ಯಾಗಾರದಲ್ಲಿ ತಂಬಾಕು ರಹಿತ ದಿನದ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು. ವಿದ್ಯಾರ್ಥಿ ನಾಯಕ ಪ್ರತೀಕ್ ಅನಿಸಿಕೆ ವ್ಯಕ್ತಪಡಿಸಿದರು. ಶಾಲೆಯ ಮುಖ್ಯ ಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ಪಿ. ವಿ. ಆನಂದ ಸಾಲಿಗ್ರಾಮ ನಿರೂಪಿಸಿ, ಮಹೇಶ್ ನಾಯ್ಕ್ ವಂದಿಸಿದರು. ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments