ಜನರಿಗೆ ಭೂಮಿಯ ಹಕ್ಕುಪತ್ರ ಸಿಗಬೇಕು : ಶಾಸಕ ಕಿರಣ್ ಕುಮಾರ್ ಕೊಡ್ಗಿ.
ಅಧಿಕಾರಿಗಳು ಜನರಿಗೆ ಸ್ಪಂದಿಸಬೇಕು : ಕೋಟ ಶ್ರೀನಿವಾಸ ಪೂಜಾರಿ
ಬೆಳ್ವೆ : ತಮ್ಮ ಭೂಮಿಯ ಹಕ್ಕು ಪತ್ರ ಸಿಗದ ಅನೇಕ ಮಂದಿ ಇದ್ದಾರೆ. ಅವರಿಗೆ ಹಕ್ಕು ಪತ್ರ ಕೊಡಿಸುವ ಕೆಲಸವಾಗಬೇಕು. ಅಧಿಕಾರಿಗಳು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು, ಕೇಂದ್ರ ಸರ್ಕಾರದ ಹಲವು ಯೋಜನೆಗಳು ಇರುತ್ತವೆ. ಆದರೆ ಜನರಿಗೆ ಇದರ ಬಗ್ಗೆ ಮಾಹಿತಿ ಇಲ್ಲ. ಯಾವುದೇ ಹೆದ್ದಾರಿಯಲ್ಲಿ ಅಪಘಾತವಾದಲ್ಲಿ ತಕ್ಷಣ ಚಿಕಿತ್ಸೆಗಾಗಿ 1.5 ಲಕ್ಷ ರೂ. ಉಚಿತವಾಗಿ ದೊರೆಯುತ್ತದೆ. ಜನರಿಗೆ ಅರಿವು ಇಲ್ಲ. ಅಧಿಕಾರಿಗಳು ಯೋಜನೆಯನ್ನು ಅರ್ಹರಿಗೆ ತಲುಪಿಸಬೇಕು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಎಂದು ಹೇಳಿದರು.
ಅವರು ಸೋಮವಾರ ಬೆಳ್ವೆ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ನಡೆದ ವಿವಿಧ ಅಧಿಕಾರಿಗಳ ಜನ ಸಂಪರ್ಕಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜನರ ಸಮಸ್ಯೆಗಳನ್ನು ಆಲಿಸಿ, ತುರ್ತು ಪರಿಹಾರ ನೀಡುವ ಕಾರ್ಯಕ್ರಮ ಜನ ಸಂಪರ್ಕಸಭೆಯಾಗಿದೆ. ಸಭೆ ಸದುಪಯೋಗವಾಗಬೇಕು. ಆಗ ಮಾತ್ರ ಜನರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ. ಮಳೆಗಾಲ ಆರಂಭಗೊಂಡಿರುವುದರಿಂದ ಆರೋಗ್ಯ ಇಲಾಖೆ ಸರಿಯಾಗಿ ಕೆಲಸ ಮಾಡಬೇಕು. ಮಳೆ ಮಾಪನ ಇಲಾಖೆ ಸರಿಯಾಗಿ ಕರ್ತವ್ಯ ನಿರ್ವಹಿಸದ ಹಿನ್ನಲೆಯಲ್ಲಿ ಅನೇಕ ರೈತರಿಗೆ ಸರ್ಕಾರದ ಸೌಲಭ್ಯ ಪಡೆಯಲು ಕಷ್ಟವಾಗುತ್ತಿದೆ. ವಿವಿಧ ಇಲಾಖೆಗಳ ಅಧಿಕಾರಿಗಳು ಇರುವುದರಿಂದ ಜನ ಸಂಪರ್ಕ ಸಭೆಯ ಮೂಲಕ ಸ್ಥಳೀಯವಾದ ಸಮಸ್ಯೆಗಳಿಗೆ ಸಹಕಾರ ಕಂಡುಕೊಳ್ಳಲಾಗುತ್ತದೆ ಎಂದರು.
ಅಧಿಕಾರಿಗಳು ಜನರಿಗೆ ಸ್ಪಂದಿಸಬೇಕು : ಕೋಟ ಶ್ರೀನಿವಾಸ ಪೂಜಾರಿ

ಜನ ಸಂಪರ್ಕ ಸಭೆಯ ಮೂಲಕ ಜನರ ಸಮಸ್ಯೆಗಳನ್ನು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಆಲಿಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಭೆಯಾಗಿದೆ. ಆ ಮೂಲಕ ಅನೇಕ ಸಮಸ್ಯೆಗಳನ್ನು ಬಗೆ ಹರಿಸಲು ಸಾಧ್ಯ. ಜನಪ್ರತಿನಿಧಿಗಳ ಬಳಿ ಜನರ ಸಮಸ್ಯೆಗಳು ಬರದ ಹಾಗೇ ಅಧಿಕಾರಿಗಳು ಜನರಿಗೆ ಸ್ಪಂದಿಸಬೇಕು ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಹೆಬ್ರಿ ತಾಲ್ಲೂಕು ಪ್ರಭಾರ ತಹಶೀಲ್ಧಾರ್ ಪ್ರದೀಪ್ ಕುರ್ಡೆಕರ್, ಹೆಬ್ರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ್ ರಾವ್, ಬೆಳ್ವೆ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಚಿದಾನಂದ್ ಉಪಸ್ಥಿತರಿದ್ದರು.
ಜನ ಸಂಪರ್ಕ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಿದರು. ಕುಂದಾಪುರ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಪ್ರೇಮಾನಂದ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿಕಾರಿ ಉಮೇಶ್, ಕಾರ್ಕಳ ತಾಲ್ಲೂಕು ಕೃಷಿ ಅಧಿಕಾರಿ ರಮೇಶ್ ಡಿ.ಉಳ್ಳಗಡ್ಡಿ, ಕುಂದಾಪುರ ತಾಲ್ಲೂಕು ತೋಟಗಾರಿಕ ಅಧಿಕಾರಿ ಮಧುಕರ್, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಹೆಬ್ರಿ ಮೆಸ್ಕಾ ಜೆಇಇ ಉಮೇಶ್ ದೇವಾಡಿಗ, ಅಲ್ಬಾಡಿ ಘಟಕದ ಅರಣ್ಯಾಧಿಕಾರಿ ಹೇಮಾ, ಪಶು ವೈದ್ಯಾಧಿಕಾರಿ ಸಮಿತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಅಧಿಕಾರಿ ಪ್ರಸನ್ನ, ಪಂಚಾಯತ್ ರಾಜ್ ಇಲಾಖೆಯ ಎಂಜಿನಿಯರ್ ಮಧುಕುಮಾರ್, ಪಿಡ್ಲ್ಯೂಡಿ ಇಲಾಖೆಯ ಎಂಜಿನಿಯರ್ ರಂಜಿತ್, ಬೆಳ್ವೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್. ಚಂದ್ರಶೇಖರ ಶೆಟ್ಟಿ ಸುರ್ಗೋಳಿ, ಶಂಕರನಾರಾಯಣ ಪೊಲೀಸ್ ಠಾಣಾಧಿಕಾರಿ ಗಡ್ಡೇಕರ್ ಮೊದಲಾದ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು,
ಬೆಳ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಲವಾರು ವರ್ಷಗಳಿಂದ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಡಾ. ರಾಜೇಶ್ವರಿ ಅವರನ್ನು ಸಮ್ಮಾನಿಸಿ, ಗೌರವಿಸಿದರು. ಸಾರ್ವಜನಿಕರಿಂದ ಸುಮಾರು 55 ಅರ್ಜಿಗಳನ್ನು ಸ್ವೀಕರಿಸಿ ಕೆಲವು ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲಾಯಿತು.


