Sunday, August 9, 2026
Homeಹೆಬ್ರಿಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಸಾಗಾಣಿಕೆ ವಿರೋಧಿ ದಿನ -2026: ಎಸ್‌.ಆರ್. ಹೆಬ್ರಿ

ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಸಾಗಾಣಿಕೆ ವಿರೋಧಿ ದಿನ -2026: ಎಸ್‌.ಆರ್. ಹೆಬ್ರಿ

ಹೆಬ್ರಿಯ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆ ಹಾಗೂ ಹೆಬ್ರಿಯ ಪೊಲೀಸ್ ಠಾಣೆಯ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಸಾಗಾಣಿಕೆಯ ವಿರೋಧಿ ದಿನಾಚರಣೆ ಪ್ರಯುಕ್ತ ಮಾದಕ ವಸ್ತುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ಮತ್ತು ಜಾಗೃತಿಯನ್ನು ಮೂಡಿಸಿದರು. ಇದರ ಕುರಿತು ಬೆಂಗಳೂರಿನಿಂದ‌ ನಡೆದ ನೇರಪ್ರಸಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಬಳಿಕ ಹೆಬ್ರಿ ಪೊಲೀಸ್ ಠಾಣೆಯ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಅಣ್ಣಪ್ಪ ಎನ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಪ್ರತಿಜ್ಞಾವಿಧಿ ಬೋಧಿಸಿದರು.

ಈ ಸಂದರ್ಭದಲ್ಲಿ ಎಸ್. ಆರ್ ಪಬ್ಲಿಕ್ ಸ್ಕೂಲ್ನ ಉಪಪ್ರಾಂಶುಪಾಲರಾದ ದೀಪಕ್ ಎನ್, ಹೆಬ್ರಿ ಠಾಣೆಯ ಕಾನ್ಸ್ಟೇಬಲ್ ಮನೋಹರ್, ಶಿಕ್ಷಕರಾದ ಮಂಜುನಾಥ್, ಪ್ರತಿಕ್ಷಾ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments