ಆಗುಂಬೆಯಲ್ಲಿ ಸುರಂಗ ಮಾರ್ಗ ಬೇಡ.
ಮುದ್ರಾಡಿ : ಹೆಬ್ರಿ ಆಗುಂಬೆ ರಸ್ತೆ ಅಭಿವೃದ್ಧಿ ಪಡಿಸುವಾಗ ಸುರಂಗ ಮಾರ್ಗ ನಿರ್ಮಿಸುವುದು ಬೇಡ. ಪರಿಸರ ಉಳಿಸಿ ಅಭಿವೃದ್ಧಿ ಪಡಿಸಬೇಕು, ಇದು ನಮ್ಮೆಲ್ಲರ ಸಾರ್ವಜನಿಕರ ಬೇಡಿಕೆಯಾಗಿದೆ. ಉಡುಪಿಯಿಂದ ಹೆಬ್ರಿಯವರೆಗೆ ಟೆಂಡರ್ ಆದ ನಂತರ ಬೇರೆ ಬೇರೆ ಕಾರಣಗಳಿಂದ ನಿಗದಿಪಡಿಸಿದ ಅವಧಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲಿಲ್ಲ. ಆ ಕಾಮಗಾರಿಗಳು ತ್ವರಿತಗತಿಯಲ್ಲಿ ಪೂರ್ಣಗೊಳ್ಳುವಂತೆ ಕ್ರಮಕೈಗೊಳ್ಳಲು ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಅವರು ಆಗುಂಬೆ ಘಾಟಿಯ ಪರಿಶೀಲನೆ ವೇಳೆಯಲ್ಲಿ ಬುಧವಾರ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಮಾಡಿದರು.
ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮತ್ತಿತರರು ಉಪಸ್ಥಿತರಿದ್ದರು.


