ಧರ್ಮಸ್ಥಳದ ಶೌರ್ಯ ತಂಡದ ಸೇವೆ ದೇಶಕ್ಕೆ ಮಾದರಿ. – ಶಾಂತಿಲಾಲ್ ಜಟಿಯಾ
ಹೆಬ್ರಿ : ಶೌರ್ಯ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಯ ತಂಡದ ಕೆಲಸವು ಸೇವಾ ಮನೋಭಾವದಿಂದ ಕೂಡಿದ್ದು,ಯಾವುದೇ ಕೆಲಸಕ್ಕೆ ತಮ್ಮನ್ನು ತಾವು ತೊಡಗಿಸಿಕೊಂಡು ಸದಾ ಸೇವೆಗೆ ಸಿದ್ದ ಎನ್ನುವ ಭಾವನೆಯಿಂದ ದುಡಿಯುತ್ತಿರುವ ಸದಸ್ಯರ ಶಕ್ತಿಯನ್ನು ಮೆಚ್ಚುವಂತದ್ದು,. ತಾವು ಮಾಡುವ ಈ ಸೇವೆಯು ದೇಶಸೇವೆಗೆ ಸಮಾನವಾದದು, ಸೈನಿಕನು ಗಡಿಯನ್ನು ರಕ್ಷಿಸಿದರೆ ಸೇವಾ ಮನೋಭಾವವನ್ನು ಹೊಂದಿರುವ ಶೌರ್ಯ ತಂಡದ ಸದಸ್ಯರು ತಮ್ಮ ತಮ್ಮ ಗ್ರಾಮ ವ್ಯಾಪ್ತಿಯಲ್ಲಿ ತಮ್ಮಸೇವೆಯ ಮೂಲಕ ಸಮಾಜವನ್ನು ಸರಿಪಡಿಸುತ್ತಿದ್ದೀರಿ. ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಕಮಾಂಡರ್ ಶಾಂತಿಲಾಲ್ ಜಟಿಯ ಹೇಳಿದರು
ಜುಲೈ 21ರ ಹೆಬ್ರಿಯ ಮಂಗಳವಾರ ಚೈತನ್ಯ ಸಮುದಾಯ ಭವನ ಹೆಬ್ರಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಹೆಬ್ರಿ ತಾಲೂಕು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂಸೇವಕರ ತರಬೇತಿ ಕಾರ್ಯಗಾರ ಉದ್ದೇಶಿಸಿ ಮಾತನಾಡಿದರು.
ಹೆಬ್ರಿ ಸಬ್ ಇನ್ಸ್ ಪೆಕ್ಟರ್ ಚಂದ್ರ ಎ.ಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಶೌರ್ಯ ತಂಡದ ಸದಸ್ಯರು ವಿಪತ್ತು ನಿರ್ವಹಣಾ ಸಂದರ್ಭದಲ್ಲಿ ತಮ್ಮ ಜೀವದ ಸುರಕ್ಷತೆ ಬಗ್ಗೆ ವಿಶೇಷ ಗಮನದಲ್ಲಿಟ್ಟು ಕಾರ್ಯ ಮಾಡಬೇಕು ಹಾಗೂ ತಮ್ಮ ಗ್ರಾಮದಲ್ಲಿ ನಡೆಯುವ ಸಂಭವನೀಯ ಆಪತ್ತಿನ ಸಂಧರ್ಭದಲ್ಲಿ ಪೋಲಿಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ನೀರೆ ಕೃಷ್ಣ ಶೆಟ್ಟಿ ಸಂಘಟನಾ ಅಧ್ಯಕ್ಷರು ಜನಜಾಗೃತಿ ವೇದಿಕೆ ಉಡುಪಿ ಜಿಲ್ಲೆ ಇವರು ವಹಿಸಿ ಶೌರ್ಯ ಸ್ವಯಂ ಸೇವಕರಿಗೆ ಶುಭ ಹಾರೈಸಿದರು.
ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ಜಿಲ್ಲಾ ನಿರ್ದೇಶಕರಾದ ನಾಗರಾಜ್ ಶೆಟ್ಟಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ರಚನೆಯ ಉದ್ದೇಶ ಹಾಗೂ ಅದರ ಕಾರ್ಯ ಸ್ವರೂಪಗಳ ಬಗ್ಗೆ ಮಾಹಿತಿ ನೀಡಿದರು.
ಕೇಂದ್ರ ಕಚೇರಿಯ ಶೌರ್ಯ ಕಾರ್ಯಕ್ರಮದ ಯೋಜನಾಧಿಕಾರಿ ಜೈವಂತ್ ಪಟಗಾರ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು
ಕಾರ್ಯಕ್ರಮದಲ್ಲಿ ಹೆಬ್ರಿ ಶೌರ್ಯ ಸಮಿತಿ ಮಾಸ್ಟರ್ ಸುರೇಶ್ ಭಂಡಾರಿ, ಜನಜಾಗೃತಿ ಮೇಲ್ವಿಚಾರಕ ನಿತೇಶ್ ಕೆ, ಶ್ರೀ ಉದಯ್, ಹಣಕಾಸು ಪ್ರಬಂಧಕರಾದ ಗುರುಪ್ರಸಾದ್ ಉಪಸ್ಥಿತರಿದ್ದರು.
ಉದ್ಘಾಟನಾ ಸಭಾ ಕಾರ್ಯಕ್ರಮದ ಬಳಿಕ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಎಎಸ್ಐ ಸುಭಾಷ್ ಶಿಂಧೆ ನೇತೃತ್ವದ ತಂಡದಿಂದ ತುರ್ತು ಸಂದರ್ಭದಲ್ಲಿ ನಿರ್ವಹಿಸಬೇಕಾದ ಕಾರ್ಯಗಳ ಬಗ್ಗೆ ಪ್ರಾತ್ಯಕ್ಷತೆಗಳ ಮೂಲಕ ತರಬೇತಿ ನೀಡಿದರು.
ಈ ಸಂದರ್ಭದಲ್ಲಿ ಹೆಬ್ರಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಮಾಸ್ಟರ್ ಹಾಗೂ ಕ್ಯಾಪ್ಟನ್ ಗಳನ್ನು ಆಯ್ಕೆ ಮಾಡಲಾಯಿತು
ಕ್ಷೇತ್ರ ಯೋಜನಾಧಿಕಾರಿ ರೇಷ್ಮಾ ಸ್ವಾಗತಿಸಿ, ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ವಂದಿಸಿದರು. ವಲಯ ಮೇಲ್ವಿಚಾರಕಿ ರೇವತಿ ನಿರೂಪಿಸಿದರು.



