Sunday, August 9, 2026
Homeಹೆಬ್ರಿಹೆಬ್ರಿ ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಸಂತೆಕಟ್ಟೆಯಲ್ಲಿ 2096ನೇ ಮದ್ಯವರ್ಜನ ಶಿಬಿರ

ಹೆಬ್ರಿ ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಸಂತೆಕಟ್ಟೆಯಲ್ಲಿ 2096ನೇ ಮದ್ಯವರ್ಜನ ಶಿಬಿರ

 ಮದ್ಯವರ್ಜನ ಶಿಬಿರದಿಂದ ಲಕ್ಷಾಂತರ ಕುಟುಂಬಗಳಿಗೆ ಬೆಳಕಾಗಿದೆ. – ವಾದಿರಾಜ ಶೆಟ್ಟಿ.

ಕಳ್ತೂರು ಸಂತೇಕಟ್ಟೆ (ಹೆಬ್ರಿ) : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹೆಬ್ರಿ ತಾಲ್ಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ ಉಡುಪಿ ಜಿಲ್ಲೆ ಹೆಬ್ರಿ ತಾಲ್ಲೂಕು ಘಟಕ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ದೇರಳಕಟ್ಟೆ (ಕ್ಷೇಮ), ಪ್ರಾಥಮಿಕ ಆರೋಗ್ಯ ಕೇಂದ್ರ ಕರ್ಜೆ, ಪೊಲೀಸ್ ಠಾಣೆ ಹೆಬ್ರಿ, ಗ್ರಾಮ ಪಂಚಾಯಿತಿ 38ನೇ ಕಳ್ತೂರು, ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ಕೊಕ್ಕರ್ಣೆ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳು ಚೇರ್ಕಾಡಿ ವಲಯ, ಶೌರ್ಯ ವಿಪತ್ತು ನಿರ್ವಹಣಾ ಸಮಿತಿ, ತಾಲ್ಲೂಕು ಭಜನಾ ಪರಿಷತ್, ನವಜೀವನ ಸಮಿತಿ ಹೆಬ್ರಿ ತಾಲ್ಲೂಕು, ಸ್ಥಳೀಯ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರ ಸಹಯೋಗದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ 2096ನೇ ಮದ್ಯವರ್ಜನ ಶಿಬಿರವು ಹೆಬ್ರಿ ಸಮೀಪದ ಸಂತೆಕಟ್ಟೆಯ ಶ್ರೀ ಗಣೇಶ ಮಂದಿರದಲ್ಲಿ ಭಾನುವಾರ ಜರುಗಿತು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹೆಬ್ರಿ ತಾಲ್ಲೂಕು ಅಧ್ಯಕ್ಷ ವಾದಿರಾಜ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿಯಿಂದ ಆರಂಭವಾದ ಜನಜಾಗೃತಿ ಮತ್ತು ಮದ್ಯವರ್ಜನ ಶಿಬಿರವು ಇಂದು ಲಕ್ಷಾಂತರ ಕುಟುಂಬಗಳಿಗೆ ಬೆಳಕಾಗಿದೆ. ವ್ಯಸನದಿಂದ ವ್ಯಕ್ತಿ ಮಾತ್ರವಲ್ಲದೆ ಇಡೀ ಕುಟುಂಬವೇ ನಾಶವಾಗುತ್ತದೆ. ಪ್ರತಿಯೊಬ್ಬ ವ್ಯಸನಿಯು ಶಿಬಿರದ ಮೂಲಕ ನವಜೀವನ ಪಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು” ಎಂದರು.

ಕರಾವಳಿ ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆ ಯೋಜನಾಧಿಕಾರಿ ಗಣೇಶ ಆಚಾರ್ಯ ಮಾತನಾಡಿ, ಶಿಬಿರದ ರೂಪರೇಷೆಗಳ ಮಾಹಿತಿ ನೀಡಿದರು. “35 ವರ್ಷದ ಹಿಂದೆ ಆರಂಭವಾದ ಶಿಬಿರವು ಇಂದು ರಾಜ್ಯದ ವಿವಿಧ ಭಾಗಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದ್ದು, ಇದುವರೆಗೆ ಸುಮಾರು 1,50,000 ಕ್ಕೂ ಅಧಿಕ ನವಜೀವನ ಸದಸ್ಯರನ್ನು ಒಳಗೊಂಡಿದೆ. 7 ದಿನಗಳ ಕಾಲ ನಡೆಯುವ ಶಿಬಿರದಲ್ಲಿ ವೈದ್ಯಕೀಯ ಚಿಕಿತ್ಸೆ, ಮಾನಸಿಕ ಸಮಾಲೋಚನೆ, ಯೋಗ, ಭಜನೆ ಮೂಲಕ ವ್ಯಸನಮುಕ್ತರನ್ನಾಗಿ ಮಾಡಲಾಗುತ್ತದೆ” ಎಂದರು.
ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ಉಡುಪಿ ಜಿಲ್ಲಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಯವರು ಮಾತನಾಡಿ, “ಧರ್ಮಸ್ಥಳದ ಜನಜಾಗೃತಿ ಕಾರ್ಯಕ್ರಮ ದೇಶಕ್ಕೇ ಮಾದರಿ. ಮದ್ಯಪಾನವು ಬಡತನಕ್ಕೆ ಮೂಲ ಕಾರಣ. ಮಧ್ಯ ತ್ಯಜಿಸಿದರೆ ಮಾತ್ರ ಆರ್ಥಿಕವಾಗಿ, ಸಾಮಾಜಿಕವಾಗಿ ಕುಟುಂಬ ಸದೃಢವಾಗಲು ಸಾಧ್ಯ” ಎಂದರು.
2096ನೇ ಮದ್ಯವರ್ಜನ ವ್ಯವಸ್ಥಾಪನಾ ಸಮಿತಿ ಚೇರ್ಕಾಡಿ ವಲಯದ ಅಧ್ಯಕ್ಷ ಮನೋಜ್ ಕುಮಾರ್ ಶೆಟ್ಟಿ ಅವರು ಮಾತನಾಡಿ ಶಿಬಿರಕ್ಕೆ ದಾಖಲಾದ ಸದಸ್ಯರ ವಿವರ ನೀಡಿ, ಶಿಬಿರದ ಯಶಸ್ಸಿಗೆ ಎಲ್ಲರ ಸಹಕಾರ ಕೋರಿದರು.

ಹೆಬ್ರಿ ಪೊಲೀಸ್ ಠಾಣೆಯ ಎಎಸ್ಐ ಉಮೇಶ್, ಕೆಂಚೂರು ಶಾಲೆಯ ಶಿಕ್ಷಕ ಶಾಂತರಾಜ್ ಶೆಟ್ಟಿ, ಸಂತೆಕಟ್ಟೆಯ ಉದ್ಯಮಿ ಜನನಿ ದಿವಾಕರ ಶೆಟ್ಟಿ, ಜನಜಾಗೃತಿ ವೇದಿಕೆ ಒಕ್ಕೂಟದ ಅಧ್ಯಕ್ಷರಾದ ಕಮಲಾಕ್ಷ ಹೆಬ್ಬಾರ್, ವಿಠಲ ಶೆಟ್ಟಿ, ರಾಜೇಶ್ ಪೂಜಾರಿ, ತಾಲ್ಲೂಕು ಸಮಿತಿಯ ಸದಸ್ಯರಾದ ಜಗನ್ನಾಥ್ ಕುಲಾಲ್, ಮೋಹನದಾಸ್ ನಾಯಕ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಅಧ್ಯಕ್ಷ ನವೀನ್ ಕುಮಾರ್, ಹೆಬ್ರಿ ಬಂಟರ ಸಂಘದ ಅಧ್ಯಕ್ಷ ಹರ್ಷಾ ಶೆಟ್ಟಿ ಉಪಸ್ಥಿತರಿದ್ದರು.
ಹೆಬ್ರಿ ತಾಲ್ಲೂಕು ಯೋಜನಾಧಿಕಾರಿ ರೇಷ್ಮಾ ಸ್ವಾಗತಿಸಿ ನಿರೂಪಿಸಿದರು.
ಹೆಬ್ರಿ ತಾಲೂಕಿನ ಎಲ್ಲಾ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ವಿಎಲ್‌ಇಗಳು, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳು, ಅಧ್ಯಕ್ಷರುಗಳು ಹಾಗೂ ಸರ್ವ ಸದಸ್ಯರು, ಕರಾವಳಿ ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆಯ ಮೇಲ್ವಿಚಾರಕ ಉದಯಕುಮಾರ್ ಉಪಸ್ಥಿತರಿದ್ದರು.
ಚೇರ್ಕಾಡಿ ವಲಯದ ಮೇಲ್ವಿಚಾರಕ ಸುಮನ ಪೂಜಾರಿ ವಂದಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments