ಹೆಬ್ರಿ : ಹೆಬ್ರಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ ಜುಲೈ 28 ರಂದು ಮಂಗಳವಾರ ಅಮೃತ ಭಾರತಿ ಸಭಾಂಗಣದಲ್ಲಿ ನಡೆಯಲಿದೆ.
ಅಂತರಾಷ್ಟ್ರೀಯ ಕಲಾವಿದರಾದ ದಿನೇಶ್ ಹೊಳ್ಳ ಕಾರ್ಯಕ್ರಮ ಉದ್ಘಾಟಿಸುವರು. ಹೆಬ್ರಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನರೇಂದ್ರ ಎಸ್ ಮರಸಣಿಗೆ ಅಧ್ಯಕ್ಷತೆ ವಹಿಸುವರು. ಹೆಬ್ರಿ ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಡಾ. ಭಾರ್ಗವಿ ಆರ್ ಐತಾಳ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ, ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ರಾಜ್ಯ ಸಮಿತಿ ಸದಸ್ಯ ಆಸ್ಟ್ರೋ ಮೋಹನ್, ಹೆಬ್ರಿ ಅಮೃತ ಭಾರತಿ ಟ್ರಸ್ಟ್ ಅಧ್ಯಕ್ಷ ರವಿ ರಾವ್, ಕಾರ್ಯದರ್ಶಿ ಗುರುದಾಸ ಶೆಣೈ, ಸ್ಥಾಪಕಾಧ್ಯಕ್ಷ ಸತೀಶ ಪೈ, ಅಮೃತ ಭಾರತಿ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ರಾಜೇಶ ನಾಯಕ್, ವಿದ್ಯಾಲಯ ಸಮಿತಿಯ ಅಧ್ಯಕ್ಷ ಶೈಲೇಶ್ ಕಿಣಿ ಉಪಸ್ಥಿತರಿರುವರು.
ದಿನೇಶ ಹೊಳ್ಳ ಅವರಿಂದ “ಪಶ್ಚಿಮ ಘಟ್ಟ ಉಳಿಸುವಲ್ಲಿ ಮಾಧ್ಯಮಗಳ ಹೊಣೆ” ವಿಶೇಷ ಉಪನ್ಯಾಸ ನಡೆಯಲಿದೆ. ಸಂಘದ ಸದಸ್ಯರ ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ನರೇಂದ್ರ ಎಸ್ ಮರಸಣಿಗೆ ತಿಳಿಸಿದ್ದಾರೆ.



