ಹೆಬ್ರಿ : ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ, ಅಂಧತ್ವ ನಿವಾರಣಾ ವಿಭಾಗ, ಜಿಲ್ಲಾ ಆಸ್ಪತ್ರೆ ಉಡುಪಿ, ಗ್ರಾಮ ಪಂಚಾಯತ್ ಹೆಬ್ರಿ, ಸಮುದಾಯ ಆರೋಗ್ಯ ಕೇಂದ್ರ ಹೆಬ್ರಿ, ಅಲಯನ್ಸ್ ಕ್ಲಬ್ ಉಡುಪಿ ರೋಯಲ್ ಮತ್ತು ಪ್ರಸಾದ್ ನೇತ್ರಾಲಯ ಕಣ್ಣಿನ ಆಸ್ಪತ್ರೆ ಉಡುಪಿ ಇವರ ಆಶ್ರಯದಲ್ಲಿ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು.
ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಯಾಗಿರುವ ಅಲಯನ್ಸ್ ಜಿಲ್ಲೆ 275 ದಕ್ಷಿಣದ ಪ್ರಾಂತೀಯ ಅಧ್ಯಕ್ಷ ಡಾ. ಸಂತೋಷ್ ಕುಮಾರ್ ಬೈಲೂರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸಮುದಾಯ ಆರೋಗ್ಯ ಕೇಂದ್ರ ಹೆಬ್ರಿಯ ಆಶಾಕಿರಣ ದೃಷ್ಟಿ ಕೇಂದ್ರದಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಮತ್ತು ಆಸ್ಪತ್ರೆಯಲ್ಲಿ ಸಿಗುವ ಇತರೆ ಚಿಕಿತ್ಸೆಗಳ ಬಗ್ಗೆ ಫಲಾನುಭವಿಗಳಿಗೆ ಮಾಹಿತಿ ನೀಡಿದರು.
ಸಮುದಾಯ ಆರೋಗ್ಯ ಕೇಂದ್ರ ಹೆಬ್ರಿಯ ವೈದ್ಯಾಧಿಕಾರಿಗಳಾದ ಡಾ ಉಮಾ ಶೆಟ್ಟಿ, ಡಾ.ಅರ್ಪಿತಾ ಶೆಟ್ಟಿ, ಪ್ರಸಾದ್ ನೇತ್ರಾಲಯದ ನೇತ್ರ ತಜ್ಞರಾದ ಡಾ ಪ್ರಶಾಂತ್, ಸೆನ್ಸಸ್ ಫಾರ್ಮಾ ಸಂಸ್ಥೆಯ ಮ್ಯಾನೇಜರ್ ಶಶಿಧರ್ ರೈ, ಮೋಹನ್, ಸಮುದಾಯ ಆರೋಗ್ಯ ಕೇಂದ್ರ ಹೆಬ್ರಿ ಮತ್ತು ಪ್ರಸಾದ್ ನೆತ್ರಾಲಯದ ಸಿಬ್ಬಂದಿಯವರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಆಪ್ತ ಸಮಾಲೋಚಕಿ ಪವಿತ್ರಾ ನಿರೂಪಿಸಿ ವಂದಿಸಿದರು. 120 ಫಲಾನುಭವಿಗಳು ಶಿಬಿರದಲ್ಲಿ ಭಾಗವಹಿಸಿದ್ದು, 24 ಜನ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಆಯ್ಕೆಯಾದರು.


