ಹೆಬ್ರಿ : ನಮ್ಮ ನಾಡ ಒಕ್ಕೂಟ ಹೆಬ್ರಿ ಘಟಕದ ವತಿಯಿಂದ ಅಲ್ಬಾಡಿ ಮೂರುಕೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬೆಲ್ಟ್ ಹಾಗೂ ಟೈ ವಿತರಣಾ ಕಾರ್ಯಕ್ರಮ ಇತ್ತೀಚೆಗೆ ಶಾಲಾ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಆನಂದ ಪೂಜಾರಿ ವಹಿಸಿದ್ದರು. ವಿದ್ಯಾರ್ಥಿಗಳಿಗೆ ನಮ್ಮ ನಾಡ ಒಕ್ಕೂಟ ಹೆಬ್ರಿ ಘಟಕದ ಅಧ್ಯಕ್ಷ ಅನ್ಸಾರ್ ಹೊಸಂಗಡಿ ಟೈ ಹಾಗೂ ಬೆಲ್ಟ್ ವಿತರಿಸಿದರು.
ಮುಖ್ಯ ಅತಿಥಿಗಳಾಗಿ ನಮ್ಮ ನಾಡ ಒಕ್ಕೂಟ ಹೆಬ್ರಿ ಇದರ ಉಪಾಧ್ಯಕ್ಷ ಶರೀಫ್ ಸಾಹೇಬ್ ನಮ್ಮ ನಾಡ ಒಕ್ಕೂಟ ಹೆಬ್ರಿ ಇದರ ಕಾರ್ಯದರ್ಶಿ ಅರಾಫತ್ ಅಲ್ಬಾಡಿ , ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲಾ. ಮಧ್ಯಮ ಕಾರ್ಯದರ್ಶಿ ಅಬ್ದುಲ್ ಶುಕುರ್ ಬೆಳ್ವೆ ಉಪಸ್ಥಿತರಿದ್ದರು. ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷೆ ಶ್ರೀಮತಿ ಪಾರ್ವತಿ, ಅತಿಥಿ ಶಿಕ್ಷಕಿ ಸುಮನ,ಗೌರವ ಶಿಕ್ಷಕಿ ಮನುಶ್ರೀ,ಅಂಗನವಾಡಿ ಕಾರ್ಯಕರ್ತೆ ಇಂದಿರಾ , ಹಳೆ ವಿದ್ಯಾರ್ಥಿ ಕೃಷ್ಣ ಪೂಜಾರಿ ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು .ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಉಷಾ ಹೆಬ್ಬಾರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಶಿಕ್ಷಕಿ ಸುಕನ್ಯ ನಿರೂಪಿಸಿ ವಂದಿಸಿದರು.


