ಮರ ತೆರವಿಗೆ ಅರಣ್ಯ ಇಲಾಖೆಗೆ ಹೆಬ್ರಿ ತಾಲ್ಲೂಕು ರೆಡ್ ಕ್ರಾಸ್ ಸೊಸೈಟಿ ಮನವಿ.
ಹೆಬ್ರಿ : ಮುದ್ರಾಡಿ, ಹೆಬ್ರಿ, ಶಿವಪುರ ಹೆದ್ದಾರಿ ಪಕ್ಕದಲ್ಲಿ ಬೀಳುವ ಸ್ಥಿತಿಯಲ್ಲಿ ಇರುವ ಮರಗಳು ಇವೆ. ಸಾರ್ವಜನಿಕರ ರಕ್ಷಣೆಯ ಹಿತದೃಷ್ಟಿಯಿಂದ ಕೆಲವು ಮರಗಳ ತೆರವು ಹಾಗೂ ಮರಗಳ ಗೆಲ್ಲುಗಳನ್ನು ಕಡಿಯುವಂತೆ ಹೆಬ್ರಿ ತಾಲ್ಲೂಕು ರೆಡ್ ಕ್ರಾಸ್ ಸೊಸೈಟಿಯ ವತಿಯಿಂದ ಹೆಬ್ರಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ನಿಯೋಜಿತ ಚೇರ್ಮನ್ ವೀಣಾ ಆರ್ ಭಟ್, ಕಾರ್ಯದರ್ಶಿ ಪ್ರಶಾಂತ್ ಪೈ, ಕೋಶಾಧಿಕಾರಿ ಪ್ರಕಾಶ್ ಶೆಟ್ಟಿ, ಜನಾರ್ದನ್ ಎಚ್, ಪ್ರಸಾದ್ ಶೆಟ್ಟಿ, ಪ್ರದೀಪ್ ಭಟ್, ಉದಯ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.


