ಹೆಬ್ರಿ : ಅಲಯನ್ಸ್ ಕ್ಲಬ್ಸ್ ಇಂಟರ್ನ್ಯಾಷನಲ್, ಜಿಲ್ಲೆ 275 S ವತಿಯಿಂದ ಶಾಲಾ ಮಕ್ಕಳಿಗಾಗಿ ಏರ್ಪಡಿಸಿದ್ದ ಅಂತರಾಷ್ಟ್ರೀಯ ಅಲಯನ್ಸ್ ಗ್ರೀನ್ ಪೋಸ್ಟರ್ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯ ಹಿರಿಯ ಮತ್ತು ಕಿರಿಯ ವಿಭಾಗದ ಆಯ್ಕೆ ಪ್ರಕ್ರಿಯೆಯು ಹೆಬ್ರಿ ಅಮೃತ ಭಾರತಿ ವಿದ್ಯಾ ಕೇಂದ್ರದ ಅನ್ನಪೂರ್ಣ ಸಭಾಂಗಣದಲ್ಲಿ ನೆರವೇರಿತು.
ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ಪೈಕಿ ಅತ್ಯುತ್ತಮ ಕಲಾಕೃತಿಗಳನ್ನು ಆಯ್ಕೆ ಮಾಡಿ ರಾಷ್ಟ್ರಮಟ್ಟಕ್ಕೆ ಆಯ್ಕೆ ಮಾಡಲಾಗಿದೆ.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಗವರ್ನರ್ ಶ್ರೀ ಸುನಿಲ್ ಕುಮಾರ್ ಶೆಟ್ಟಿ ಮತ್ತು ಇಂಟರ್ನ್ಯಾಷನಲ್ ಡೈರೆಕ್ಟರ್ ಶ್ರೀಧರ್ ಶೇಣವ “ಪ್ರಕೃತಿಯನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ. ಮಕ್ಕಳ ಮೂಲಕ ಪರಿಸರ ಪ್ರಜ್ಞೆಯನ್ನು ಮೂಡಿಸುವುದು ಈ ಸ್ಪರ್ಧೆಯ ಮುಖ್ಯ ಉದ್ದೇಶವಾಗಿದೆ” ಎಂದು ಹೇಳಿದರು.
ಮರಗಳನ್ನು ಬೆಳೆಸುವುದು, ಪ್ಲಾಸ್ಟಿಕ್ ಮುಕ್ತ ಶಾಲೆ, ನೀರಿನ ಸಂರಕ್ಷಣೆ ಮತ್ತು ಹಸಿರು ಭೂಮಿಯನ್ನು ಉಳಿಸುವುದು ನಮ್ಮ ಭವಿಷ್ಯದ ಅಗತ್ಯವಾಗಿದೆ ಎಂದು ಹೇಳಿದರು.
ಅಮೃತ ಭಾರತಿ ವಿದ್ಯಾ ಕೇಂದ್ರದ ಅಧ್ಯಕ್ಷ ಗುರುದಾಸ ಶೆಣೈ ಮಾತನಾಡಿ “ಸಮಾಜಮುಖಿ ಕೆಲಸಗಳಿಗೆ ಅಮೃತ ಭಾರತಿ ಸರ್ವದಾ ಸಿದ್ಧ” ಈ ಹಿಂದೆಯೂ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೂಲಕ ಪರಿಸರ ಸಂರಕ್ಷಣೆಗೆ ಕೈಗೊಂಡ ಕ್ರಮಗಳನ್ನು ನೆನಪಿಸಿದರು.
ಕಾರ್ಯಕ್ರಮದಲ್ಲಿವಿದ್ಯಾಲಯದ ಅಧ್ಯಕ್ಷ ಶೈಲೇಶ್ ಕಿಣಿ , ಸಂಸ್ಥೆಯ ಪಿ.ಆರ್.ಓ ವಿಜಯ್ ಕುಮಾರ್ ಶೆಟ್ಟಿ
ಪ್ರಾಂಶುಪಾಲ ಅರುಣ್, ಮುಖ್ಯ ಶಿಕ್ಷಕಿ ಶಕುಂತಲಾ, ಸುಗೀತಾ, ಅಲಯನ್ಸ್ ಕ್ಯಾಬಿನೆಟ್ ಸೆಕ್ರೆಟರಿ: ಕೆ. ರಾಮಚಂದ್ರ ಭಟ್, ಹೆಬ್ರಿ ಅಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಚಂದ್ರ ಎಂ, ಸದಸ್ಯರಾದ ಇಂದಿರಾ ಬಾಯಾರಿ, ಕೃಷ್ಣರಾಜ ಹಾಗೂ ಗಣ್ಯರು ಉಪಸ್ಥಿತರಿದ್ದರು.


