ಕಳ್ತೂರು ಸಂತೆಕಟ್ಟೆ : ಹೆಬ್ರಿ ತಾಲ್ಲೂಕಿನ ಚೆರ್ಕಾಡಿ ವಲಯದ ಸಂತೆಕಟ್ಟೆ ಅಲ್ಲಿ ನಡೆದ 2096 ನೇ ಮದ್ಯವರ್ಜನ ಶಿಬಿರದ ಕುಬುಂಬ ದಿನದ ಕಾರ್ಯ ಕ್ರಮ ನಡೆಯಿತು.
ಧರ್ಮ ಸ್ಥಳ ಯೋಜನೆಯ ಜನಜಾಗೃತಿ ವಿಭಾಗದ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ ಪಾಯಸ್ ಕಾರ್ಯಕ್ರಮ ಉದ್ಘಾಟಿಸಿ ಶಿಬಿರಾರ್ಥಿಗಳಿಗೆ ಮಾಹಿತಿ ಮಾರ್ಗ ದರ್ಶನ ನೀಡಿದರು.
ಉಡುಪಿ ಜಿಲ್ಲೆಯ ಜಿಲ್ಲಾ ನಿರ್ದೇಶಕ ನಾಗರಾಜ ಶೆಟ್ಟಿ ಶಿಬಿರಾರ್ಥಿಗಳಿಗೆ ಹಾಗೂ ಅವರ ಕುಟುಂಬದವರಿಗೆ ಪಾನ ಮುಕ್ತ ಜೀವನದೊಂದಿಗೆ ಉತ್ತಮ ಜೀವನ ನಿರ್ವಹಣೆ ಕುರಿತು ಮಾರ್ಗದರ್ಶನ ನೀಡಿದರು.
ಉಡುಪಿ ಶಾಸಕ ಯಶ್ ಪಾಲ್ ಎ . ಸುವರ್ಣ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ದುಶ್ಚಟ ಮುಕ್ತ ಸಮಾಜ ನಿರ್ಮಾಣ ಮಾಡುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.
ಮದ್ಯವರ್ಜನ ಸಮಿತಿ ಅಧ್ಯಕ್ಷ ಮನೋಜ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ , ಜನಜಾಗೃತಿ ವೇದಿಕೆಯ ಅಧ್ಯಕ್ಷ ವಾದಿರಾಜ ಶೆಟ್ಟಿ, ಗೌರವಾಧ್ಯಕ್ಷ ಉದಯ್ ಕುಮಾರ್ ನಾಯಕ್, ಉದ್ಯಮಿ ಸುರೇಶ್ ಶೆಟ್ಟಿ ತಡಾಲ್ ಕರ್ಜೆ, ಕೊಕ್ಕರ್ಣೆ ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಬ್ರಹ್ಮಾವರ ಜನ ಜಾಗೃತಿ ವೇದಿಕೆ ಅಧ್ಯಕ್ಷ ಪ್ರಸಾದ್ ಹೆಗ್ಡೆ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಹರೀಶ್ ಶೆಟ್ಟಿ, ಜನ ಜಾಗೃತಿ ವಲಯಾಧ್ಯಕ್ಷ ಕಮಲಾಕ್ಷ ಹೆಬ್ಬಾರ್ ಉಪಸ್ಥಿತರಿದ್ದರು.



