ಮುನಿಯಾಲು : ವರಂಗ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಯುವಮೋರ್ಚಾ ವತಿಯಿಂದ 15 ಆಗಸ್ಟ್ ನಲ್ಲಿ ನಡೆಯಲಿರುವ ತಿರಂಗಾ ಯಾತ್ರೆಯನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆ ಹಾಗೂ ಸಿದ್ಧತಾ ಕಾರ್ಯಕ್ರಮದ ಸಭೆಯನ್ನು ಮುನಿಯಾಲು ಪದ್ಮಾವತಿ ಕಲಾ ಮಂದಿರದಲ್ಲಿ ಭಾನುವಾರ ನಡೆಸಲಾಯಿತು.
ತಿರಂಗಾ ಯಾತ್ರೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಲು ಜವಾಬ್ದಾರಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸೇರಿ ಚರ್ಚಿಸಲಾಯಿತು.
ನಗರ ಪ್ರದಾನ ಕಾರ್ಯದರ್ಶಿ ರಾಜೇಶ್ ಆಚಾರ್ಯ, ಬೈಲೂರು ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಹರೀಶ್, ಹೆಬ್ರಿ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಸಮೃದ್ಧಿ ಪ್ರಕಾಶ್ ಶೆಟ್ಟಿ,
ವರಂಗ ಗ್ರಾಮ ಯುವಮೋರ್ಚಾ ಅಧ್ಯಕ್ಷ ಅಜಯ್ ದೇವಾಡಿಗ, ಸುರೇಂದ್ರ ಶೆಟ್ಟಿ, ರತ್ನಾಕರ ಪೂಜಾರಿ, ಸುರೇಂದ್ರ ಕುಲಾಲ್ ವರಂಗ. ಉಪಸ್ಥಿತರಿದ್ದರು.


