ಹೆಬ್ರಿ : ಕರ್ನಾಟಕ ಸರ್ಕಾರದ ಹಿರಿಯ ಭೂವಿಜ್ಞಾನ, ಜಿಲ್ಲಾ ಅಂತರ್ಜಲ ಕಛೇರಿ, ಅಂತರ್ಜಲ ನಿರ್ದೇಶನಾಲಯ ಉಡುಪಿ ವತಿಯಿಂದ ನಡೆದ ಅಂತರ್ಜಲ ಸಂರಕ್ಷಣೆ ಮತ್ತು ಸದ್ಭಳಕೆ ವಿಷಯದ ಕುರಿತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಡುಪಿಯ ಬೋರ್ಡ್ ಹೈಸ್ಕೂಲ್ನಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ 2026 ರಲ್ಲಿ ಹೆಬ್ರಿ ಎಸ್.ಆರ್.ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸಾನಿಧ್ಯ ಆಚಾರ್ಯ ಪ್ರಥಮ ಸ್ಥಾನ ಪಡೆದಿದ್ದಾರೆ.
ಈಕೆ ತಾಲೂಕು ಮಟ್ಟದಲ್ಲಿ ಮತ್ತು ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು 7,500 ರೂಪಾಯಿ ನಗದು ಬಹುಮಾನವನ್ನು ಪಡೆದುಕೊಂಡಿದ್ದಾಳೆ.
ವಿದ್ಯಾರ್ಥಿನಿಯನ್ನು ಎಸ್ ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಚ್ ನಾಗರಾಜ ಶೆಟ್ಟಿ ಹಾಗೂ ಕಾರ್ಯದರ್ಶಿ ಸಪ್ನಾ ಎನ್ ಶೆಟ್ಟಿ ಅವರು ಅಭಿನಂದಿಸಿದ್ದಾರೆ.



