Wednesday, August 19, 2026
Homeಹೆಬ್ರಿಪಡುಕುಡೂರು ಕಂಬಳಮನೆ ಸುಧಾಕರ ಶೆಟ್ಟಿ ಅವರಿಗೆ ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ.

ಪಡುಕುಡೂರು ಕಂಬಳಮನೆ ಸುಧಾಕರ ಶೆಟ್ಟಿ ಅವರಿಗೆ ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ.

ಪಡುಕುಡೂರು : ಎಂ.ಡಿ.ಅಧಿಕಾರಿ ಯೂತ್‌ ಕ್ಲಬ್‌ (ರಿ) ಪಡುಕುಡೂರು ವತಿಯಿಂದ ಸ್ವಾತಂತ್ರ್ಯ ಹೋರಾಟಗಾರ ಪಡುಕುಡೂರು ಬೀಡು ಎಂ.ಡಿ.ಅಧಿಕಾರಿ ಯವರ ಹೆಸರಿನಲ್ಲಿ ಸ್ಥಾಪಿಸಿದ ಪ್ರಥಮ ವರ್ಷದ ” ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ – ೨೦೨೬” ಕ್ಕೆ ಸಮಾಜ ಸೇವಕ ಮುನಿಯಾಲು ಶ್ರೀ ಮಹಾಗಣಪತಿ ಸೇವಾ ಸಮಿತಿಯ ಸಂಸ್ಥಾಪಕ ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿಯವರನ್ನು ಆಯ್ಕೆ ಮಾಡಲಾಗಿದೆ ಎಂದುಎಂ.ಡಿ.ಅಧಿಕಾರಿ ಯೂತ್‌ ಕ್ಲಬ್‌ ಅಧ್ಯಕ್ಷ ಸಂದೀಪ್‌ ಶೆಟ್ಟಿ ಪಟೇಲರ ಮನೆ ತಿಳಿಸಿದ್ದಾರೆ. ನಿರಂತರವಾಗಿ ತೆರೆಮರೆಯಲ್ಲಿ ಜನಸೇವೆಯಲ್ಲಿ ಸಕ್ರೀಯವಾಗಿರುವ ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಮುನಿಯಾಲು ಅವರು ಕಳೆದ ೨೫ ಕ್ಕೂ ಹೆಚ್ಚು ವರ್ಷಗಳಿಂದ ಮುನಿಯಾಲು ಶ್ರೀ ಮಹಾಗಣಪತಿ ಸೇವಾ ಸಮಿತಿಯಯ ಮೂಲಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮವನ್ನು ಅವರ ತಂಡದೊಂದಿಗೆ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ.

ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಗಸ್ಟ್‌ ೧೫ ರಂದು ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ.ಅಧಿಕಾರಿ ಯೂತ್‌ ಕ್ಲಬ್‌ (ರಿ) ಪಡುಕುಡೂರು ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ೮೦ನೇ ಸ್ವಾತಂತ್ರ್ಯೋತ್ಸವ, ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ಪಡುಕುಡೂರು ೨ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಪಡುಕುಡೂರು ಬೀಡು ಎಂ.ಡಿ.ಅಧಿಕಾರಿಯವರ ಪ್ರತಿಮೆ ಪ್ರತಿಷ್ಠಾಪನೆಯ ನೆನಪಿನ ಸಂಭ್ರಮದಲ್ಲಿ ಪ್ರಶಸ್ತಿ ಪ್ರಧಾನ ನಡೆಯಲಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments