ಪಡುಕುಡೂರು : ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ.ಅಧಿಕಾರಿ ಯೂತ್ ಕ್ಲಬ್ (ರಿ) ಪಡುಕುಡೂರು ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ 80ನೇ ಸ್ವಾತಂತ್ರ್ಯೋತ್ಸವ, ಎಂ.ಡಿ. ಅಧಿಕಾರಿ ಯೂತ್ ಕ್ಲಬ್ ಪಡುಕುಡೂರು 2ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಪಡುಕುಡೂರು ಬೀಡು ಎಂ.ಡಿ.ಅಧಿಕಾರಿಯವರ ಪ್ರತಿಮೆ ಪ್ರತಿಷ್ಠಾಪನೆಯ ನೆನಪಿನ ಸಂಭ್ರಮ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಗಸ್ಟ್ 15 ರಂದು ನಡೆಯಲಿದೆ. 8 ಗಂಟೆಗೆ ಎಂ.ಡಿ.ಅಧಿಕಾರಿ ಪ್ರತಿಮೆಗೆ ಮಾಲಾರ್ಪಣೆಯ ಬಳಿಕ ಶಾಲೆಯಲ್ಲಿ ರಾಷ್ಟ್ರ ಧ್ವಜಾರೋಹಣ ನಡೆಯಲಿದೆ. ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿಯವರಿಗೆ “ಎಂ.ಡಿ.ಅಧಿಕಾರಿ ಪ್ರಶಸ್ತಿ – 2026” ಪ್ರಥಮ ವರ್ಷದ ಪ್ರಶಸ್ತಿ ಪ್ರಧಾನ ನಡೆಯಲಿದೆ.
2025-26ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಉಡುಪಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಪಡುಕುಡೂರು ಶಾಲೆಯ ಮುಖ್ಯ ಶಿಕ್ಷಕ ಹರೀಶ ಪೂಜಾರಿ ಮತ್ತು ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾವಿನಕಟ್ಟೆ ಶಂಕರ ಶೆಟ್ಟಿ ಪಂಚವಟಿ ಅವರಿಗೆ ಸನ್ಮಾನ ನಡೆಯಲಿದೆ. ವಿವಿಧ ಕಾರ್ಯಕ್ರಮಗಳು ನಡೆಯಲಿದೆ ಎಂದು ಎಂ.ಡಿ.ಅಧಿಕಾರಿ ಯೂತ್ ಕ್ಲಬ್ ಅಧ್ಯಕ್ಷ ಸಂದೀಪ್ ಶೆಟ್ಟಿ ಪಟೇಲರ ಮನೆ ತಿಳಿಸಿದ್ದಾರೆ. ಗೌರವಾಧ್ಯಕ್ಷ ಹರೀಶ ಶೆಟ್ಟಿ ಪಡುಪರ್ಕಳ ಮಾರ್ಗದರ್ಶನದಲ್ಲಿ ಉಪಾಧ್ಯಕ್ಷ ಸಚಿನ್ ಪೂಜಾರಿ ಸೇಣರಬೆಟ್ಟು, ಪ್ರಧಾನ ಕಾರ್ಯದರ್ಶಿ ರಕ್ಷಣ್ ಶೆಟ್ಟಿ ಅಚೆಬೆಟ್ಟು, ಜೊತೆ ಕಾರ್ಯದರ್ಶಿ ಪ್ರಣಯ್ ಶೆಟ್ಟಿ ಚಿಕ್ಕಮಾರಬೆಟ್ಟು ಅವರ ಸಹಕಾರದಲ್ಲಿ ಗೌರವರ ಸಲಹೆಗಾರರು, ಸರ್ವಸದಸ್ಯರು, ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕಿಯರು, ವಿದ್ಯಾರ್ಥಿಗಳು, ಪೋಷಕರ ಸಹಕಾರದಲ್ಲಿ ಸಂಭ್ರಮ ನಡೆಯಲಿದೆ.


