ವಿವಿಧ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಬೇಕು : ಎಚ್.ನಾಗರಾಜ್ ಶೆಟ್ಟಿ.
ಹೆಬ್ರಿ : ಹೆಬ್ರಿ ಎಸ್. ಆರ್. ಪಬ್ಲಿಕ್ ಸ್ಕೂಲ್ ನಲ್ಲಿ ಗುರುವಾರ ಶಾಲೆಯ ಎಸ್. ಆರ್. ಸಭಾಂಗಣದಲ್ಲಿ “ಸ್ಪೆಕ್ಟ್ರಂ ಆಫ್ ಯುನಿಟಿ” ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ವಿದ್ಯಾರ್ಥಿಗಳು ತಮ್ಮಲ್ಲಿ ಅಡಗಿರುವ ಪ್ರತಿಭೆಗಳನ್ನು ತೋರ್ಪಡಿಸಲು ಇಂತಹ ವೇದಿಕೆ ಅವಶ್ಯಕ. ವಿದ್ಯಾರ್ಥಿಗಳು ವಿವಿಧ ಕ್ಷೇತ್ರದಲ್ಲಿ ನಿಮ್ಮನ್ನು ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು. ಗುರಿಯನ್ನು ತಲುಪಲು ಸದಾ ಕಾಲ ಪ್ರಯತ್ನ ಪಡಬೇಕು. ಎಂದು ಎಸ್. ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್. ನಾಗರಾಜ್ ಶೆಟ್ಟಿ ಅವರು ಹೇಳಿದರು. ಅವರು ಎಸ್.ಆರ್ ಪಬ್ಲಿಕ್ ಸ್ಕೂಲ್ (ಕೇಂದ್ರೀಯ ಪಠ್ಯಕ್ರಮ) 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ “ಸ್ಪೆಕ್ಟ್ರಂ ಆಫ್ ಯುನಿಟಿ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಎಸ್ ಆರ್ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಪ್ನಾ ಎನ್ ಶೆಟ್ಟಿ ಮಾತನಾಡಿ, ಅಚ್ಚುಕಟ್ಟಾಗಿ ಇಂದಿನ ಕಾರ್ಯಕ್ರಮದ ವ್ಯವಸ್ಥೆಯನ್ನು ಮಾಡಿದ್ದೀರಿ. ಇಂದು ನಿಮ್ಮ ನಿಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಿ. ಕಾರ್ಯಕ್ರಮ ಆಯೋಜಿಸಿದ ಶಿಕ್ಷಕರು ಮತ್ತು ಎಲ್ಲಾ ವಿದ್ಯಾರ್ಥಿಗಳಿಗೂ ಶುಭವಾಗಲಿ. ಎಲ್ಲರೂ ಸಂಭ್ರಮಿಸಿ, ಭಾಗವಹಿಸಿ ಎಲ್ಲರೂ ಅವಕಾಶವನ್ನು ಬಳಸಿಕೊಳ್ಳಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಎಸ್.ಆರ್ ಪಬ್ಲಿಕ್ ಸ್ಕೂಲಿನ ಪ್ರಾಂಶುಪಾಲೆ ಭಗವತಿ, ಉಪಪ್ರಾಂಶುಪಾಲ ದೀಪಕ್ ಎನ್, ಎಸ್.ಆರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಗೋಪಾಲ ಆಚಾರ್ಯ, ಕೋಓರ್ಡಿನೇಟರ್ ಅಕ್ಷಿತಾ, ಶಿಕ್ಷಕರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿಶೇಷವಾಗಿ ವಿದ್ಯಾರ್ಥಿಗಳ ಕೈಯಲ್ಲಿ ಅರಳಿದ ಕರ್ನಾಟಕ, ತಮಿಳುನಾಡು, ಕೇರಳ, ರಾಜಸ್ಥಾನ, ಪಂಜಾಬ್, ಅಸ್ಸಾಂ, ಮಹಾರಾಷ್ಟ್ರ, ಗುಜರಾತ್ ರಾಜ್ಯಗಳ ವೈದಿಧ್ಯತೆಯನ್ನು ಸಾರುವ ತಿಂಡಿ-ತಿನಿಸುಗಳು, ಮಾಡೆಲ್ ಗಳು, ಚಿತ್ರಗಳು, ಪೇಪರ್ ಕ್ರಾಫ್ಟ್ ಗಳು ಆಕರ್ಷಣೆಯಾಗಿತ್ತು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನವು ನಡೆಯಿತು.
ವಿದ್ಯಾರ್ಥಿಗಳಾದ ಕೌಶಿಕ್ ಆರ್ ಜೆ ನಿರೂಪಿಸಿ, ಯೋಗಿತ್ ಎಸ್ ಸ್ವಾಗತಿಸಿ, ನರ್ಮದಾ ವಂದಿಸಿದರು.


