Wednesday, August 19, 2026
Homeಹೆಬ್ರಿಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ.

ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ.

ಪಡುಕುಡೂರು : ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಿಂದ ನಡೆಯಿತು.

ಶಾಲೆಯ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಭಾರವಿ ಶೆಟ್ಟಿ ಪಟೇಲರ ಮನೆ ನೆರವೇರಿಸಿದರು.ಬಳಿಕ ಶಾಲೆಯಲ್ಲಿ ಛದ್ಮವೇಷ ಸ್ಪರ್ಧೆ, ದೇಶಭಕ್ತಿ ಗೀತೆಯ ಸಹಿತ ವಿವಿಧ ಸ್ಪರ್ಧೆ, ಸಾಂಸ್ಕೃತಿಕ ಸಂಭ್ರಮ ನಡೆಯಿತು.ಸ್ವಾತಂತ್ರ್ಯ ಸೇನಾನಿಗಳ ವೇಷ ಧರಿಸಿದ ಶಾಲಾ ಮಕ್ಕಳು ಎಲ್ಲರ ಗಮನ ಸೆಳೆದರು.

ಬ್ಯಾಂಡ್ ವಾದನ ಜೊತೆಗೆ ಶಾಲಾ ಮಕ್ಕಳು ಗಣ್ಯರು ಸೇರಿ ಎಲ್ಲರೂ ಮೆರವಣಿಗೆಯಲ್ಲಿ ತೆರಳಿ ಎಂ.ಡಿ.ಅಧಿಕಾರಿ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ವಿವಿಧ ಪ್ರಮುಖರಾದ ಪಡುಕುಡೂರು ಕಂಬಳಮನೆ ಸುಧಾಕರ ಶೆಟ್ಟಿ, ಪಡುಕುಡೂರು ಪಡುಪರ್ಕಳ ಶಂಕರ ಶೆಟ್ಟಿ, ಹರೀಶ್ ಶೆಟ್ಟಿ ಪಡುಪರ್ಕಳ, ಜಗದೀಶ ಹೆಗ್ಡೆ, ಶಂಕರ ಶೆಟ್ಟಿ ಮುನಿಯಾಲು,ಅಶೋಕ್ ಎಂ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿ ಶೆಟ್ಟಿ, ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಭಾರವಿ ಶೆಟ್ಟಿ, ಸಂಚಾಲಕ ಪ್ರಸನ್ನ ಶೆಟ್ಟಿ, ಮುಖ್ಯ ಶಿಕ್ಷಕ ಹರೀಶ್ ಪೂಜಾರಿ, ಎಂ.ಡಿ.ಅಧಿಕಾರಿ ಯೂತ್ ಕ್ಲಬ್ ಅಧ್ಯಕ್ಷ ಸಂದೀಪ್ ಶೆಟ್ಟಿ, ಶಿಕ್ಷಕರು, ವಿವಿಧ ಸಂಸ್ಥೆಗಳ ಪ್ರಮುಖರು,ಶಾಲಾಭಿವೃದ್ಧಿ ಸಮಿತಿ, ಶತಮಾನೋತ್ಸವ ಸಮಿತಿಯ ಸದಸ್ಯರು, ಪದಾಧಿಕಾರಿಗಳು, ಊರಿನ ಗಣ್ಯರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments