ಕುಚ್ಚೂರು : ಕುಚ್ಚೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ ಸಂಘದ ಅಧ್ಯಕ್ಷರಾದ ಮಹೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಹಸಿರು ಮೇವು ಬೆಳೆಸುವಲ್ಲಿ ಕಾರ್ಕಳ ತಾಲ್ಲೂಕಿನಲ್ಲಿ ಮೊದಲ ಸ್ಥಾನ ಪಡೆದ ನಿತ್ಯಾನಂದ ಭಟ್ ಅವರನ್ನು ಹಾಗೂ ವಿಸ್ತರಣಾ ಅಧಿಕಾರಿ ಮಂಜುನಾಥ ಅವರನ್ನು ಸನ್ಮಾನಿಸಲಾಯಿತು.
ಕುಚ್ಚೂರು ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಪ್ರೀತ್ವಿನ್ ಎಂ ರಾವ್ ಅವರನ್ನು ಸನ್ಮಾನಿಸಲಾಯಿತು. ಸಂಘದ ಉಪಾಧ್ಯಕ್ಷರು, ನಿರ್ದೇಶಕರು,ಸದಸ್ಯರು ಉಪಸ್ಥಿತರಿದ್ದರು.
ನಿರ್ದೇಶಕರಾದ ರಾಜೀವ ಶೆಟ್ಟಿ ಸ್ವಾಗತಿಸಿದರು. ವಿಸ್ತರಣಾ ಅಧಿಕಾರಿ ಅಶ್ವಿನಿ ಹಾಲು ಉತ್ಪಾದನೆಯಲ್ಲಿ ಒಕ್ಕೂಟದಿಂದ ಮತ್ತು ಡೈರಿಯಿಂದ ಸಿಗುವ ಸವಲತ್ತುಗಳನ್ನು ತಿಳಿಸಿದರು. ಡಾ.ಧನಂಜಯ ಬಂಜೆತನ ನಿವಾರಣೆ ಬಗ್ಗೆ ಮಾಹಿತಿ ನೀಡಿದರು. ನಿರ್ದೇಶಕ ಪ್ರಸನ್ನ ಶೆಟ್ಟಿ ವಂದಿಸಿದರು.



