Thursday, September 24, 2026
Homeಹೆಬ್ರಿಹೆಬ್ರಿಯಲ್ಲಿ 16ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ:ಪೂರ್ವ ಸಿದ್ಧತಾ ಸಮಾಲೋಚನಾ ಸಭೆ.

ಹೆಬ್ರಿಯಲ್ಲಿ 16ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ:ಪೂರ್ವ ಸಿದ್ಧತಾ ಸಮಾಲೋಚನಾ ಸಭೆ.

ಹೆಬ್ರಿ : ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ, ಹೆಬ್ರಿ ವತಿಯಿಂದ ಆಯೋಜಿಸಲಾಗುತ್ತಿರುವ 16ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದ ಪೂರ್ವಭಾವಿ ಸಭೆಯು ಸಮಿತಿಯ ಗೌರವಾಧ್ಯಕ್ಷರಾದ ಎಚ್. ಪ್ರಸಾದ್ ಬಲ್ಲಾಳ್ ಅವರ ಗೌರವ ಉಪಸ್ಥಿತಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಪತ್ ಕುಮಾರ್ ಶೆಟ್ಟಿ ವಹಿಸಿದ್ದರು.

ಸಭೆಯಲ್ಲಿ ಅಕ್ಟೋಬರ್ 17ರಿಂದ 19ರವರೆಗೆ ಮೂರು ದಿನಗಳ ಕಾಲ ಶಾರದಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಯಿತು. ಅಲ್ಲದೆ, ಶಾರದಾ ಮಹೋತ್ಸವದ ಮೆರವಣಿಗೆಯನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಮಾರ್ಗವಾಗಿ ವಿಸ್ತರಿಸುವ ಕುರಿತು ಸೇರಿದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.

ಸಭೆಯಲ್ಲಿ ಗೌರವ ಸಲಹೆಗಾರರಾದ ನವೀನ್ ಅಡ್ಯಂತಾಯ, ವಾದಿರಾಜ ಶೆಟ್ಟಿ, ಹರೀಶ್ ಪೂಜಾರಿ ಹಾಗೂ ಪದಾಧಿಕಾರಿಗಳಾದ ಸುಕೇಶ್ ಶೆಟ್ಟಿ, ಹರ್ಷ ಶೆಟ್ಟಿ, ಬಾನು ಪಿ. ಬಲ್ಲಾಳ್, ವಿಜಯ ಪೂಜಾರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸಮಿತಿಯ ಪದಾಧಿಕಾರಿ ರಾಘವೇಂದ್ರ ನಾಯ್ಕ್ ಸ್ವಾಗತಿಸಿ, ಧನ್ಯವಾದ ಸಮರ್ಪಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!