Thursday, September 24, 2026
Homeಹೆಬ್ರಿಕರಾವಳಿ, ಮಲೆನಾಡು ಪ್ರವಾಸೋದ್ಯಮ ನೀತಿ ಜಾರಿ

ಕರಾವಳಿ, ಮಲೆನಾಡು ಪ್ರವಾಸೋದ್ಯಮ ನೀತಿ ಜಾರಿ

‘ಕರಾವಳಿ ಮತ್ತು ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ’ಯನ್ನು ಸರಕಾರ ಜಾರಿಗೆ ತರಲಿದೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಜತೆಗೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಚಿಕ್ಕಮಗಳೂರು, ಕೊಪ್ಪ, ಶೃಂಗೇರಿ, ಸಾಗರ, ತೀರ್ಥಹಳ್ಳಿ, ಹೊಸನಗರ ತಾಲೂಕುಗಳು, ಹಾಸನ ಜಿಲ್ಲೆಯ ಸಕಲೇಶಪುರ ಮತ್ತು ಆಲೂರು ತಾಲೂಕುಗಳಲ್ಲಿ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.

ವಿಶ್ವದರ್ಜೆ ಸೌಲಭ್ಯಗಳೊಂದಿಗೆ ಕರಾವಳಿ ಕರ್ನಾಟಕವನ್ನು ಉತ್ತಮ ಗುಣಮಟ್ಟದ ತಾಣವಾಗಿ ಸುಸ್ಥಿರವಾಗಿ ಅಭಿವೃದ್ಧಿಪಡಿಸಲು ಸರಕಾರ ರಾಜ್ಯದ ಸಮಗ್ರ 320 ಕಿ.ಮೀ. ಉದ್ದದ ಕರಾವಳಿ ಮತ್ತು ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಉಡುಪಿ ಜಿಲ್ಲೆಯ ತ್ರಾಸಿ ಮರವಂತೆ, ಕೋಡಿ, ಕುಂದಾಪುರ ಕಡಲತೀರ, ಬಾರ್ಕೂರು ಕೋಟೆ ಮತ್ತು ದಕ್ಷಿಣ ಜಿಲ್ಲೆಯ ಕೋಡಿಕಲ್ ಹಾಗೂ ತಣ್ಣೀರುಬಾವಿ ಕಡಲು ತೀರವನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!