Thursday, September 24, 2026
HomeUncategorizedಮಲ್ಪೆಯಲ್ಲಿ ಮೀನು ಕಾರ್ಮಿಕನ ಕೊಲೆ : ಆರೋಪಿ ಬಂಧನ

ಮಲ್ಪೆಯಲ್ಲಿ ಮೀನು ಕಾರ್ಮಿಕನ ಕೊಲೆ : ಆರೋಪಿ ಬಂಧನ

ರೈಲು ನಿಲ್ದಾಣದತ್ತ ಪರಾರಿಯಾಗಲು ಯತ್ನಿಸುತ್ತಿದ್ದಾಗ ಪೊಲೀಸ್ ಬಲೆಗೆ

ಉಡುಪಿ : ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಕೆರೆ ದಕ್ಕೆ ಸಮೀಪ ಬೋಟಿನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಆರೋಪಿ ಗೋವಿಂದನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆ.24ರ ರಾತ್ರಿ ಬೋಟಿನಲ್ಲಿ ಗೋವಿಂದ ಹಾಗೂ ಅಭಿಷೇಕ್ ನಡುವೆ ಗಲಾಟೆ ನಡೆದಿತ್ತು. ಆ.25ರಂದು ಮುಂಜಾನೆ ಗೋವಿಂದ, ಅಭಿಷೇಕ್‌ನನ್ನು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಮಾಹಿತಿ ಪಡೆದ ತಕ್ಷಣ ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ (ಕಾ&ಸು) ಅನಿಲ್ ಕುಮಾರ್ ಡಿ. ಅವರು ಸಿಬ್ಬಂದಿಗಳಾದ ಹೆಚ್‌ಸಿ ಆದರ್ಶ ಹಾಗೂ ಪಿಸಿ ಕುಬೇರ ಅವರೊಂದಿಗೆ ಆರೋಪಿಯ ಪತ್ತೆಗೆ ಕಾರ್ಯಾಚರಣೆ ನಡೆಸಿದರು. ಉಡುಪಿಗೆ ತೆರಳಿದ್ದ ಪೊಲೀಸರು, ಹೈದರಾಬಾದ್ ಅಥವಾ ಮುಂಬೈಗೆ ರೈಲಿನಲ್ಲಿ ಪರಾರಿಯಾಗಲು ರೈಲು ನಿಲ್ದಾಣದತ್ತ ತೆರಳುತ್ತಿದ್ದ ಗೋವಿಂದನನ್ನು ತಕ್ಷಣ ವಶಕ್ಕೆ ಪಡೆದಿದ್ದಾರೆ.

ವಿಚಾರಣೆ ವೇಳೆ ಗೋವಿಂದ ಕಳೆದ ಸುಮಾರು 15 ವರ್ಷಗಳಿಂದ ಮನೆಗೆ ತೆರಳದೆ ಮುಂಬೈ, ಹೈದರಾಬಾದ್ ಸೇರಿದಂತೆ ವಿವಿಧೆಡೆ ಕೆಲಸ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ತಿಳಿದುಬಂದಿದೆ.
ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 92/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 103ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಗೋವಿಂದನನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!