ಹೆಬ್ರಿ : ಹೆಬ್ರಿಯ ಕನ್ಯಾನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದ ಹೆಬ್ರಿ ವೃತ್ತ ಮಟ್ಟದ 14 ರ ವಯೋಮಾನದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಶತಮಾನೋತ್ಸವ ಸಂಭ್ರಮದಲ್ಲಿರುವ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.
ಮುಖ್ಯ ಶಿಕ್ಷಕ ಹರೀಶ್ ಪೂಜಾರಿ ಎಸ್ ತರಬೇತಿ ನೀಡಿದ್ದಾರೆ. ಸತತ 3ನೇ ಬಾರಿ ಪ್ರಶಸ್ತಿ ಪಡೆದು ಹ್ಯಾಟ್ರಿಕ್ ಸಾಧನೆ ಮಾಡಿದೆ. ಮಕ್ಕಳ ಸಾಧನೆಗೆ ಶಾಲಾಭಿವೃದ್ಧಿ ಸಮಿತಿ, ಶತಮಾನೋತ್ಸವ ಸಮಿತಿ, ಹಳೇ ವಿದ್ಯಾರ್ಥಿ ಸಂಘ ಮತ್ತು ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕಿಯರು ಅಭಿನಂದನೆ ಸಲ್ಲಿಸಿದೆ.



