ಅಜೆಕಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಜೆಕಾರು ವಲಯದ 3ನೇ ಒಕ್ಕೂಟದ ತ್ರೈಮಾಸಿಕ ಸಭೆಯು ರಾಮಮಂದಿರದಲ್ಲಿ ಇತ್ತೀಚೆಗೆ ಜರುಗಿತು
ಕಾರ್ಕಳ ತಾಲ್ಲೂಕು ಕಚೇರಿಯ ಆಹಾರ ನಿರೀಕ್ಷಕಿ ಸುಲೋಚನಾ ಆಗಮಿಸಿ ರೇಷನ್ ಕಾರ್ಡ್ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷ ಪ್ರವೀಣ್, ವಲಯ ಮೇಲ್ವಿಚಾರಕಿ ನಿಷ್ಮಿತಾ, ಸೇವಾ ಪ್ರತಿನಿಧಿ ವಿಜಯ ಕಾಮತ್ , ಒಕ್ಕೂಟದ ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು.
ಒಕ್ಕೂಟ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು ನೂತನ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಅವರು ಆಯ್ಕೆಗೊಂಡರು.




