Thursday, September 24, 2026
Homeಹೆಬ್ರಿಕ್ರೀಡಾ ಭಾರತಿ ಹೆಬ್ರಿ ತಾಲೂಕು: ರಾಷ್ಟ್ರೀಯ ಕ್ರೀಡಾ ದಿನಾಚರಣೆ 2026 

ಕ್ರೀಡಾ ಭಾರತಿ ಹೆಬ್ರಿ ತಾಲೂಕು: ರಾಷ್ಟ್ರೀಯ ಕ್ರೀಡಾ ದಿನಾಚರಣೆ 2026 

ವಿಜಯಕುಮಾರ್ ಶೆಟ್ಟಿ ಅವರಿಗೆ ಅಮೃತ ದ್ರೋಣಾಚಾರ್ಯ ಪ್ರಶಸ್ತಿ ಪ್ರಧಾನ.

ಹೆಬ್ರಿ : ಕ್ರೀಡಾ ಭಾರತಿ ಹೆಬ್ರಿ ತಾಲ್ಲೂಕು ಮತ್ತು ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ 2026 ಆಚರಿಸಲಾಯಿತು.

ಇದೇ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ವಿವಿಧ ವಿದ್ಯಾಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ , ಕಳೆದ 15 ವರ್ಷಗಳಿಂದ ಪಿ ಆರ್ ಎನ್ ಅಮೃತ ಭಾರತಿ ಪದವಿಪೂರ್ವ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಸೇವೆ ಸಲ್ಲಿಸಿ , ರಾಷ್ಟ್ರ , ರಾಜ್ಯಮಟ್ಟದ ಕ್ರೀಡಾ ಪ್ರತಿಭೆಗಳ ತರಬೇತುದಾರರಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಬಾಳನ್ನು ಬೆಳಗುವುದರ ಜೊತೆಗೆ , ಯೋಗ ತರಬೇತುದಾರರಾಗಿ , ರಾಜ್ಯಮಟ್ಟದ ಖೋ-ಖೋ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿರುವುದರ ಜೊತೆಗೆ, ಕ್ರೀಡಾ ಭಾರತಿ ಹೆಬ್ರಿ ತಾಲೂಕು ಘಟಕದ ಕಾರ್ಯದರ್ಶಿಯಾಗಿ, ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹೆಬ್ರಿ ತಾಲೂಕು ಘಟಕದ ಕಾರ್ಯದರ್ಶಿಯಾಗಿ , ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆಯ ಶಾರೀರಿಕ್ ಪ್ರಮುಖ್ ರಾಗಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಹೆಬ್ರಿ ತಾಲೂಕು ಕ್ರೀಡಾ ಸಂಯೋಜಕರಾಗಿ, ಪಂದ್ಯಾಟ ಮತ್ತು ಕ್ರೀಡಾಕೂಟಗಳ ಅಮೋಘ ಉದ್ಘೋಷಕರಾಗಿ , ಉತ್ತಮ ಸಂಘಟಕರಾಗಿ ಹತ್ತು ಹಲವಾರು ಪಂದ್ಯಾಟ ಹಾಗೂ ಕ್ರೀಡಾಕೂಟಗಳನ್ನು ಸಂಘಟಿಸಿ ಕ್ರೀಡಾ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಜಯಕುಮಾರ್ ಶೆಟ್ಟಿ ಅವರಿಗೆ ಅಮೃತ ದ್ರೋಣಾಚಾರ್ಯ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು.

ಕ್ರೀಡಾ ಭಾರತಿ ಹೆಬ್ರಿ ತಾಲೂಕು ಗೌರವಾಧ್ಯಕ್ಷರಾದ ಅಮೃತ ಭಾರತಿ ಟ್ರಸ್ಟ್ ಕಾರ್ಯದರ್ಶಿ ಗುರುದಾಸ್ ಶಣೈ ಸಭಾ ಅಧ್ಯಕ್ಷತೆ ವಹಿಸಿಕೊಂಡಿದ್ದರು.

ಎಚ್. ಸೀತಾರಾಮ ಶೆಟ್ಟಿ ಬಾರ್ಕೂರು, ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾ ಅಧ್ಯಕ್ಷ ಟಿ ಜಿ ಪಾಂಡುರಂಗ ಪೈ ಸಿದ್ದಾಪುರ, ಕ್ರೀಡಾ ಭಾರತಿ ಅಧ್ಯಕ್ಷ ಸೀತಾನದಿ ವಿಠಲ್ ಶೆಟ್ಟಿ , ಟ್ರಸ್ಟಿಗಳಾದ ಯೋಗೇಶ್ ಭಟ್, ಸುಧೀರ್ ನಾಯಕ್, ಹಾಸ್ಟೆಲ್ ಕಮಿಟಿ ಸದಸ್ಯರಾದ ರಾಮಕೃಷ್ಣ ಆಚಾರ್ಯ, ಸಂಸ್ಥೆಯ ಮುಖ್ಯಸ್ಥರಾದ ಪ್ರಕಾಶ್ ಜೋಗಿ, ಅರುಣ್ ಎಚ್ ವೈ , ಅಪರ್ಣ ಆಚಾರ್, ಶಕುಂತಲಾ ಉಪಸ್ಥಿತರಿದ್ದರು.

ಶಿಕ್ಷಕಿ ಮಮತಾ ನಿರೂಪಿಸಿ ದೈಹಿಕ ಶಿಕ್ಷಣ ಶಿಕ್ಷಕ ರವೀಂದ್ರ ಶೆಟ್ಟಿ ವಂದಿಸಿದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!