ಹೆಬ್ರಿ : ಆಗುಂಬೆಯಿಂದ ಹೆಬ್ರಿ ಕಡೆಗೆ ತೆರಳುತ್ತಿದ್ದ ಟಿಟಿ ವಾಹನ ಸೋಮೇಶ್ವರ ಸಮೀಪ ವೇಗವಾಗಿ ಸಂಚರಿಸುವ ವೇಳೆ ರಸ್ತೆ ಬದಿಯ ಕಂದಕಕ್ಕೆ ಉರುಳಿ ಅಪಘಾತ ಸಂಭವಿಸಿದೆ. ಶುಕ್ರವಾರ ಬೆಳಗ್ಗೆ ಘಟನೆ ನಡೆದಿದೆ.
ಶಿವಮೊಗ್ಗದಿಂದ ಕಾರ್ಕಳ ಕಡೆಗೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ವಾಹನದ ಮುಂಭಾಗವು ಸಂಪೂರ್ಣ ಜಖಂಗೊಂಡಿದೆ. ಇನ್ನೊಂದು ಘಟನೆಯಲ್ಲಿ, ಶಿವಮೊಗ್ಗದಿಂದ ಉಡುಪಿ ಕಡೆಗೆ ತೆಂಗಿನಕಾಯಿ ಸಾಗಿಸುತ್ತಿದ್ದ ಪಿಕ್ಅಪ್ ವಾಹನ ಆಗುಂಬೆಯ ಹತ್ತನೇ ತಿರುವಿನಲ್ಲಿ ಬ್ರೇಕ್ ವೈಫಲ್ಯದಿಂದ ಅಪಘಾತಕ್ಕೀಡಾಗಿದೆ. ವಾಹನ ಚಾಲಕ ಹಾಗೂ ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.




