ಪಡುಕುಡೂರು : ಹೆಬ್ರಿ ತಾಲ್ಲೂಕಿನ ಮುನಿಯಾಲು ಸಮೀಪದ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಶತಮಾನೋತ್ಸವ ಸಂಭ್ರಮದಲ್ಲಿದ್ದು ವಿಶೇಷ ಪ್ರಚಾರಕ್ಕಾಗಿ ಶತಮಾನೋತ್ಸವದ ಸ್ಟಿಕ್ಕರ್ ಅನಾವರಣ ಕಾರ್ಯಕ್ರಮ ಮತ್ತು ಶಾಲಾ ಶತಮಾನೋತ್ಸವದ ಬೃಹತ್ ಪೂರ್ವಭಾವಿ ಸಭೆ ಸೆಷ್ಟಂಬರ್ 13 ರಂದು ಬೆಳಿಗ್ಗೆ 9:30 ಕ್ಕೆ ಸರಿಯಾಗಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಶಾಸಕ ಸುನಿಲ್ ಕುಮಾರ್, ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ರಾಜ್ಯದ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ, ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರು, ಪದಾಧಿಕಾರಿಗಳು, ಸಮಿತಿಯ ಸರ್ವ ಸರ್ವ ಸದಸ್ಯರು, ಗ್ರಾಮಸ್ಥರು, ಶಿಕ್ಷಣಾಭಿಮಾನಿಗಳು, ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಭಾಗವಹಿಸಲಿದ್ದಾರೆ.
ಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ, ಹಳೆವಿದ್ಯಾರ್ಥಿ ಸಂಘ ಮತ್ತು ಶತಮಾನೋತ್ಸವ ಸಮಿತಿಯ ಅಧ್ಯಕ್ಷರು,ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕೋರಿದ್ದಾರೆ.



