ಹೆಬ್ರಿ : ಹೆಬ್ರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮನದ ಹಿನ್ನೆಲೆಯಲ್ಲಿ ಪೂರ್ವ ತಯಾರಿ ಭರದಿಂದ ನಡೆಯುತ್ತಿದೆ. ಹೆಲಿಪ್ಯಾಡ್ ನಿರ್ಮಾಣ, ಮೈದಾನದ ಪರಿಸರ ಸ್ವಚ್ಚತಾ ಕಾರ್ಯ, ಪೆಂಡಲ್ ನಿರ್ಮಾಣ, ಪಾರ್ಕಿಂಗ್ ವ್ಯವಸ್ಥೆ ಸಹಿತ ಹಲವು ಕಾರ್ಯಗಳು ನಡೆಯುತ್ತಿವೆ.
ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಸಭಾ ಕಾರ್ಯಕ್ರಮದ ಕಾಮಗಾರಿ ವೀಕ್ಷಣೆ ನಡೆಸಿದರು.
ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನಿಯಾಲು ಗೋಪಿನಾಥ್ ಭಟ್, ಪ್ರಚಾರ ಸಮಿತಿಯ ಅಧ್ಯಕ್ಷ ನವೀನ್ ಕೆ ಅಡ್ಯಂತಾಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಮಾ ಎನ್ ಅಡ್ಯಂತಾಯ, ವಿವಿಧ ಪ್ರಮುಖರಾದ ಹರೀಶ್ ಶೆಟ್ಟಿ ನಾಡ್ಪಾಲು, ಪ್ರಸನ್ನ ಶೆಟ್ಟಿ ಪಡುಕುಡೂರು, ಭಾರವಿ ಶೆಟ್ಟಿ ಪಡುಕುಡೂರು, ಚಂದ್ರಶೇಖರ ಶೆಟ್ಟಿ ಸೀತಾನದಿ, ಸುಮಿತ್ರಾ ಹೆಗ್ಡೆ , ಸುಮಿತ್ರಾ ನಾಯ್ಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.




