ಹೆಬ್ರಿ: ಕಸ್ತೂರಿ ರಂಗನ್ ವರದಿ ಜಾರಿಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಸಲುವಾಗಿ ಮತ್ತು ಮುಖ್ಯಮಂತ್ರಿಗಳ ಹೆಬ್ರಿ ಭೇಟಿ ಹಿನ್ನೆಲೆಯಲ್ಲಿ ವಿಶೇಷ ಗ್ರಾಮ ಸಭೆಯನ್ನು ಬುಧವಾರ ಹೆಬ್ರಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಹೆಬ್ರಿ ಉಪವಲಯ ಅಧಿಕಾರಿ ಶೇಖರ್ ಅವರು ಭಾಗವಹಿಸಿ ಕಸ್ತೂರಿ ರಂಗನ್ ವರದಿಯ ಸಾಧಕ ಮತ್ತು ಬಾದಕದ ಬಗ್ಗೆ ಮಾಹಿತಿ ನೀಡಿದರು.
ಗ್ರಾಮ ಪಂಚಾಯತ್ ಮಾಜಿ ಸದಸ್ಯ ನವೀನ್ ಕೆ ಅಡ್ಯಂತಾಯ ಕಸ್ತೂರಿರಂಗನ್ ವರದಿಯ ಭಾದಕದ ಬಗ್ಗೆ ವಿವರವಾಗಿ ಸಭೆಯಲ್ಲಿ ವಿಚಾರ ಮಂಡಿಸಿದರು ಮತ್ತು ವರದಿಯ ಗಡಿಮಿತಿಯನ್ನು ಬದಲಾಯಿಸಲು ಸಲಹೆಗಳನ್ನು ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಶೋಕ್ ಎಚ್ ಇರವರು ಪ್ರಾಸ್ತಾವಿಕವಾಗಿ ಮಾತನಾಡಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಮುಖ್ಯ ಮಂತ್ರಿಗಳ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಲು ವಿನಂತಿದರು.
ಸದಸ್ಯರು ರೈತರು ಉದ್ಯಮಿಗಳು ಕಾರ್ಮಿಕರು ವರದಿ ಜಾರಿ ಬಗ್ಗೆ ಆಕ್ಷೇಪ ತಿಳಿಸಿದರು. ಸಭೆಯಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಚ್ ಕೆ ಸುಧಾಕರ್, ಸುಮಾ ಎನ್ ಅಡ್ಯಂತಯ, ತಾರನಾಥ ಎಸ್ ಬಂಗೇರ, ಗ್ರಾಮ ಪಂಚಾಯತ್ ಮಾಜಿ ಸದಸ್ಯರುಗಳು ನಾಗರಿಕರು ಭಾಗವಹಿಸಿದ್ದರು. ಗ್ರಾಮ ಪಂಚಾಯತ್ ಸಿಬ್ಬಂದಿ ಪ್ರಸಾದ್ ಶೆಟ್ಟಿ ಸ್ವಾಗತಿಸಿ ಧನ್ಯವಾದ ಸಲ್ಲಿಸಿದರು.





