Thursday, September 24, 2026
Homeಹೆಬ್ರಿಹಾಲಿನ ದರ ಏರಿಕೆ ಶೀಘ್ರವೇ ಸಭೆ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಹಾಲಿನ ದರ ಏರಿಕೆ ಶೀಘ್ರವೇ ಸಭೆ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

‌ಬಾಳೆಹೊನ್ನೂರು : ಹಾಲಿನ ಖರೀದಿ ದರ ಏರಿಕೆ ಮಾಡಬೇಕು ಎಂದು ರೈತರಿಂದ ಬೇಡಿಕೆ ಹೆಚ್ಚಾಗಿದ್ದು, ಈ ಸಂಬಂಧ ಶೀಘ್ರವೇ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬಾಳೆಹೊನ್ನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತಮಿಳುನಾಡಿನಲ್ಲಿ ಲೀಟರ್‌ ಹಾಲಿಗೆ ₹9ರಿಂದ ₹10 ಹೆಚ್ಚಳ ಮಾಡಲಾಗಿದೆ. ಅದೇ ರೀತಿ ಕರ್ನಾಟಕದಲ್ಲೂ ಉತ್ಪಾದಕರಿಗೆ ಲೀಟರ್ ಹಾಲಿಗೆ ₹8ರಿಂದ ₹9 ಹೆಚ್ಚಳ ಮಾಡಬೇಕು ಎಂದು ರೈತರು ಗಲಾಟೆ ಮಾಡುತ್ತಿದ್ದಾರೆ. ಆದ್ದರಿಂದ ಶೀಘ್ರವೇ ಹಾಲಿನ ಒಕ್ಕೂಟಗಳ ಸಭೆ ನಡೆಸಲಾಗುವುದು’ ಎಂದು ಹೇಳಿದರು.

‘ಇಂಡಿ, ಬೂಸಾ ಬೆಲೆ ಜಾಸ್ತಿಯಾಗಿದ್ದು, ಮೇವು ಸಿಗದಂತಾಗಿದೆ. ಹಾಲು ಉತ್ಪಾದಕ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಹಾಲು ಉತ್ಪಾದಕ ಸಹಕಾರ ಸಂಘಗಳು ಕೂಡ ನಷ್ಟದಲ್ಲಿವೆ. ಪಕ್ಕದ ರಾಜ್ಯಗಳಲ್ಲಿ ಹಾಲಿನ ದರ ಜಾಸ್ತಿ ಇರುವುದರಿಂದ ಅಲ್ಲಿಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲು ಹೋಗುತ್ತಿದೆ. ಇದರಿಂದ ನಂದಿನಿ ಹಾಲು ಉತ್ಪಾದಕ ಸೊಸೈಟಿಗಳು ನಷ್ಟ ಅನುಭವಿಸುವಂತಾಗಿದೆ. ಆದ್ದರಿಂದ ಇದನ್ನು ತಡೆಯಲು ಏನು ಮಾಡಬೇಕು ಎಂಬುದರ ಕುರಿತು ಚರ್ಚಿಸಲಾಗುವುದು’ ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!