Wednesday, September 23, 2026
Homeಹೆಬ್ರಿಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ವಿಶ್ವ ಆಲ್ಝೈಮರ್ ದಿನ ಕಾರ್ಯಕ್ರಮ.

ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ವಿಶ್ವ ಆಲ್ಝೈಮರ್ ದಿನ ಕಾರ್ಯಕ್ರಮ.

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ, ಜಿಲ್ಲಾ ಆಸ್ಪತ್ರೆ ಉಡುಪಿ, ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (KaBHI), ಹಾಗೂ ಸಾರ್ವಜನಿಕ ಆಸ್ಪತ್ರೆ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆಲ್ಝೈಮರ್ ದಿನದ ಪ್ರಯುಕ್ತ ಉದ್ಘಾಟನಾ ಕಾರ್ಯಕ್ರಮವನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸಂದೀಪ್ ಕುಡ್ವ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಡಾ. ಚಂದ್ರಕಾಂತ್ (ಫಿಜಿಷಿಯನ್), ಡಾ. ಮಾಲಿನಿ (ನೇತ್ರತಜ್ಞರು), ಡಾ. ಶಶಾಂಕ್ ಶೆಟ್ಟಿ (ಮನೋರೋಗ ತಜ್ಞರು, DMHP ಉಡುಪಿ), ಶ್ರೀಮತಿ ಸುಶೀಲಾ (BEO), ವೀಣಾ (ನರ್ಸಿಂಗ್ ಅಧಿಕಾರಿ), ನರ್ಸಿಂಗ್ ಸೂಪರ್ ವೈಸರ್, ಶುಶ್ರೂಷಾ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ KaBHI ತಂಡದ ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಡಾ. ಶಶಾಂಕ್ ಶೆಟ್ಟಿ ಮತ್ತು ಡಾ. ಸಂದೀಪ್ ಕುಡ್ವ ರವರು ಆಲ್ಝೈಮರ್ ಕಾಯಿಲೆ, ಅದರ ಲಕ್ಷಣಗಳು ಮತ್ತು ನಿರ್ವಹಣೆ ಕುರಿತು ಮಾಹಿತಿ ನೀಡಿದರು.

KaBHI ಜಿಲ್ಲಾ ಸಂಯೋಜಕಿ ಅರ್ಪಿತಾ ಬ್ರಹ್ಮಾವರ ಅವರು ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (KaBHI) ಹಾಗೂ ಮೆದುಳಿನ ಆರೋಗ್ಯದ ಮಹತ್ವದ ಕುರಿತು ಜಾಗೃತಿ ಮೂಡಿಸಿದರು.

ಕಾರ್ಯಕ್ರಮವು ಜಿಲ್ಲಾ ಕುಷ್ಠರೋಗ ಅಧಿಕಾರಿ ಹಾಗೂ KaBHI ನೋಡಲ್ ಅಧಿಕಾರಿ ಡಾ. ಲತಾ ನಾಯಕ್ ಮಾರ್ಗದರ್ಶನದಲ್ಲಿ ನಡೆಯಿತು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!