Saturday, September 26, 2026
Homeಹೆಬ್ರಿಹೆಬ್ರಿಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ - 2026-27

ಹೆಬ್ರಿಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ – 2026-27

ಹೆಬ್ರಿ : ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಹಾಗೂ ಹೆಬ್ರಿ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ 14 ಹಾಗೂ 17 ವಯೋಮಿತಿಯ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ-2026-27 ಹೆಬ್ರಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ನಡೆಯಿತು.

ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸೀತಾನದಿ ವಿಜೇಂದ್ರ ಶೆಟ್ಟಿ ವಹಿಸಿದ್ದರು. ಕ್ರೀಡಾಕೂಟವನ್ನು ಉದ್ಯಮಿ ಎಚ್. ವಾದಿರಾಜ ಶೆಟ್ಟಿ ಉದ್ಘಾಟಿಸಿದರು. ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಹೆಬ್ರಿ ತಾಲ್ಲೂಕು ಅಧ್ಯಕ್ಷ ಶಂಕರ ಸೇರಿಗಾರ್, ರಾಷ್ಟ್ರೀಯ ಮಟ್ಟದ ವಾಲಿಬಾಲ್ ಆಟಗಾರ ಸುದೀಪ್ ಶೆಟ್ಟಿ ಮಲ್ಯಾಡಿ, ಸ್ವರ್ಣ ಉದ್ಯಮಿ ನಾರಾಯಣ ಕುಲಾಲ್, ಜಿಲ್ಲಾ ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಸೀತಾನದಿ ವಿಠಲ ಶೆಟ್ಟಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರವಿಚಂದ್ರ ಕಾರಂತ್, ಬ್ರಹ್ಮಾವರ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ,. ಕುಂದಾಪುರ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ, ಉಡುಪಿ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವೀಂದ್ರ ನಾಯ್ಕ್, ಚಾರ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ದಿನೇಶ ಶೆಟ್ಟಿ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯ ಕುಮಾರ ಶೆಟ್ಟಿ, ವಿವಿಧ ಶಿಕ್ಷಕ ಸಂಘಗಳ ಪ್ರಮುಖ ರಮಾನಂದ ಶೆಟ್ಟಿ, ಕುಸುಮಾಕರ ಶೆಟ್ಟಿ, ಶರತ್ ಶೆಟ್ಟಿ, ರಾಜಾರಾಮ ಶೆಟ್ಟಿ, ವಸಂತ ನಾಯ್ಕ್, ಆನಂದ ಪೂಜಾರಿ, ಚೇತನ್ ಕುಮಾರ್, ಶಾಲಾಭಿವೃದ್ಧಿ ಸಮಿತಿಯ ಸದಸ್ಯ ತಿಪ್ಪೇಸ್ವಾಮಿ, ಪ್ರಾಂಶುಪಾಲ ವಿಜಯ ಕುಮಾರ್, ಉಪ ಪ್ರಾಂಶುಪಾಲ ದಿವಾಕರ ಮರಕಾಲ ಉಪಸ್ಥಿತರಿದ್ದರು.

ಪ್ರವೀಣ ಕುಮಾರ್ ಶೆಟ್ಟಿ ಸ್ವಾಗತಿಸಿ ನಿರೂಪಿಸಿ ವೆಂಕಟರಮಣ ಕಲ್ಕೂರ್ ವಂದಿಸಿದರು.
ಕಾರ್ಯಕ್ರಮದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಶಾಲೆಯ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು. ಉಡುಪಿ ಜಿಲ್ಲೆಯ ವಿವಿಧ ಶಾಲೆಗಳಿಂದ 14 ಮತ್ತು 17 ವಯೋಮಿತಿಯ ಬಾಲಕ ಬಾಲಕಿಯರ ತಂಡಗಳು ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸಿದವು.

ಸಮಾರೋಪ ಸಮಾರಂಭದಲ್ಲಿ ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಮುನಿಯಾಲು, ಉದ್ಯಮಿ ರಾಜೇಶ ನಾಯಕ್, ಚೈತನ್ಯ ಯುವ ವೃಂದದ ಅಧ್ಯಕ್ಷ ಪ್ರವೀಣ್ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!