Monday, October 19, 2026
Homeಹೆಬ್ರಿಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಮಹಾಸ್ವಾಮೀಜಿ ಭೇಟಿ.

ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಮಹಾಸ್ವಾಮೀಜಿ ಭೇಟಿ.

ಪೆರ್ಡೂರು : ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ಭರದಿಂದ ಸಾಗುತ್ತಿರುವ ಈ ಶುಭ ಸಂದರ್ಭದಲ್ಲಿ ಶನಿವಾರ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದಂಗಳವರು ದೇವಸ್ಥಾನಕ್ಕೆ ಭೇಟಿ ನೀಡಿ ಕ್ಷೇತ್ರ ದರ್ಶನ ಮಾಡಿದರು.

ಜೀರ್ಣೋದ್ಧಾರ ಮಾದರಿ ವೀಕ್ಷಣೆ : ಶ್ರೀಗಳು ದೇವಸ್ಥಾನದ ಪ್ರಸ್ತಾಪಿತ ನೂತನ ಕಟ್ಟಡ ಮತ್ತು ಜೀರ್ಣೋದ್ಧಾರ ಯೋಜನೆಯ ಮಾದರಿಯನ್ನು (Model) ಕೂಲಂಕುಷವಾಗಿ ವೀಕ್ಷಿಸಿ, ಅಗತ್ಯ ಮಾರ್ಗದರ್ಶನ ನೀಡಿದರು. ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ, ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ಮಾರ್ಗದರ್ಶನ ಆಶೀರ್ವಚನ ನೀಡಿದರು. ಜೀರ್ಣೋದ್ಧಾರ ಸಮಿತಿ, ವಾರ್ಡ್ ಸಮಿತಿಯ ಸದಸ್ಯರು ಹಾಗೂ ಸಮಸ್ತ ಅನಂತನ ಭಕ್ತಾದಿಗಳು ಶ್ರೀಗಳನ್ನು ಸ್ವಾಗತಿಸಿದರು. ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆ. ಶಾಂತರಾಮ ಸೂಡ, ಪ್ರಧಾನ ಕಾರ್ಯದರ್ಶಿ ಸಂತೋಷ ಕುಲಾಲ್‌ ಪಕ್ಕಾಲ್‌, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಮೋದ ರೈ ಪಳಜೆ, ಜೀರ್ಣೋದ್ಧಾರ ಸಮಿತಿ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಪದಾಧಿಕಾರಿಗಳು, ಅರ್ಚಕ ವೃಂದದವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!