Monday, October 19, 2026
Homeಹೆಬ್ರಿಬ್ರಹ್ಮಾವರ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಾಳೆಕುದ್ರು ಮಠದ ಶ್ರೀವಾಸುದೇವ ಸದಾಶಿವಾಶ್ರಮ ಮಹಾಸ್ವಾಮೀಜಿ ಭೇಟಿ.

ಬ್ರಹ್ಮಾವರ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಾಳೆಕುದ್ರು ಮಠದ ಶ್ರೀವಾಸುದೇವ ಸದಾಶಿವಾಶ್ರಮ ಮಹಾಸ್ವಾಮೀಜಿ ಭೇಟಿ.

ಬ್ರಹ್ಮಾವರ : ಹಂಗಾರಕಟ್ಟೆ ಬಾಳೆಕುದ್ರು ಶ್ರೀಮದ್‌ ಜಗದ್ಗುರು ಆದಿಶಂಕರಾಚಾರ್ಯ ಮಹಾಸಂಸ್ಥಾನಮ್‌ಶ್ರೀ ವಾಗೀಶ್ವರಿ, ಲಕ್ಷ್ಮೀನರಸಿಂಹ ಭಾಗವತ ಮಹಾಪೀಠಮ್‌ ಪುಣ್ಯ ಸಂಗಮ ಕ್ಷೇತ್ರದ ಶ್ರೀಮದ್‌ಜಗದ್ಗುರು ಶಂಕರಾಚಾರ್ಯ ಶ್ರೀ ವಾಸುದೇವ ಸದಾಶಿವಾಶ್ರಮ ಮಹಾಸ್ವಾಮೀಜಿಗಳವರ ದ್ವಿತೀಯ ಚಾತುರ್ಮಾಸ್ಯದ ಪರಿಸಮಾಪ್ತಿಗೊಳಿಸಿ ಸೀಮೋಲ್ಲಂಘನ ಕಾರ್ಯಕ್ರಮ ನೆರವೇರಿಸಿದ ಬಳಿಕ ಶನಿವಾರ ಬ್ರಹ್ಮಾವರ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀಗಳನ್ನು ಭವ್ಯವಾಗಿ ಸ್ವಾಗತಿಸಿ ಬರ ಮಾಡಿಕೊಳ್ಳಲಾಯಿತು. ವಿಶೇಷ ಪೂಜೆ ಸಲ್ಲಿಸಿದ ಬಳಿಕ ದೇವಸ್ಥಾನದ ವತಿಯಿಂದ ಶ್ರೀವಾಸುದೇವ ಸದಾಶಿವಾಶ್ರಮ ಮಹಾಸ್ವಾಮೀಜಿ ಅವರನ್ನು ಭಕ್ತಿಪೂರ್ವಕವಾಗಿ ಗೌರವಿಸಲಾಯಿತು.

ದೇವಸ್ಥಾನದ ಪ್ರಧಾನ ಅರ್ಚಕ ಅನಂತ ಪದ್ಮನಾಭ ಭಟ್ ಪೂಜೆ ನೆರವೇರಿಸಿದರು.

ಬ್ರಹ್ಮಾವರ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಉಮೇಶ್ ಪೂಜಾರಿ, ಶೇಖರ ದೇವಾಡಿಗ, ವಿಜಯ ನಾಯರಿ, ಚಂದ್ರಶೇಖರ ನಾಯಕ್, ಇಂದಿರಾವತಿ ,
ಭಾರತೀಯ ಸಂಸ್ಕೃತಿ ಪ್ರತಿಷ್ಠಾನದ ಅಧ್ಯಕ್ಷ ಉಡುಪಿ ರಾಜಶೇಖರ್‌ ಹೆಬ್ಬಾರ್‌, ತೆಂಕಕಾರಂದೂರು ಶ್ರೀವಿಷ್ಣುಮೂರ್ತಿ ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೇಸರರಾದ ಭಾಗವತ ಧರ್ಮ ರಕ್ಷಣಾ ವೇದಿಕೆಯ ಅಧ್ಯಕ್ಷ ಕೆ. ಕೃಷ್ಣ ಸಂಪಿಗೆತ್ತಾಯ, ಬಾಳೆಕುದ್ರು ಶ್ರೀಮಠದ ಭಕ್ತ ವೃಂದದವರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!