ಪ್ರಾಪ್ತಿ ಮುದ್ರಾಡಿ ಅವರಿಗೂ ಸನ್ಮಾನ.
ಹೆಬ್ರಿ : ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಬ್ರಿಯ ಸಾರ್ವಜನಿಕ ಸಂವಾದ ಕಾರ್ಯಕ್ರಮದಲ್ಲಿ ತಮ್ಮ ಗಾಯನದ ಮೂಲಕ ನೆರೆದಿದ್ದ ಸಾವಿರಾರು ಜನರ ಮೆಚ್ಚುಗೆಗೆ ಪಾತ್ರರಾದ ಹೆಬ್ರಿ ಸುದೇಶ ಪ್ರಭು ಪ್ರಾಪ್ತಿ ಮುದ್ರಾಡಿ ಅವರನ್ನು ಇತ್ತೀಚೆಗೆ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರಾಜ್ಯದ ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಅವರ ಸಮ್ಮುಖದಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸನ್ಮಾನಿಸಿದರು.




