Sunday, October 18, 2026
Homeಹೆಬ್ರಿಬೈಂದೂರು : ಪುರುಷ ಮತ್ತು ಮಹಿಳೆಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ !

ಬೈಂದೂರು : ಪುರುಷ ಮತ್ತು ಮಹಿಳೆಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ !

ಇಬ್ಬರೂ ಪ್ರಕರಣವೊಂದರ ಆರೋಪಿಗಳಾಗಿದ್ದರು

ಗೋಳಿಹೊಳೆ ಗ್ರಾಮದ ಚಾರ್ಸಲ್‌ ಪ್ರದೇಶದ ಸೌಪರ್ಣಿಕಾ ನದಿ ಸಮೀಪ ಘಟನೆ

ಬೈಂದೂರು: ಗೋಳಿಹೊಳೆ ಗ್ರಾಮದ ಚಾರ್ಸಲ್‌ ಪ್ರದೇಶದ ಸೌಪರ್ಣಿಕಾ ನದಿ ಸಮೀಪ ಪುರುಷ ಹಾಗೂ ಮಹಿಳೆಯ ಮೃತದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮೃತರನ್ನು ಕೊಲ್ಲೂರು ಪೊಲೀಸ್ ಠಾಣೆಯ ಅಪರಾಧ ಪ್ರಕರಣದ ಆರೋಪಿಗಳಾದ ವಿಟ್ಟಲ್ ನಾಯಕ್ (35) ಹಾಗೂ ಭವ್ಯಾ ಅಲಿಯಾಸ್ ನಿಶ್ಮಿತಾ (33) ಎಂದು ಗುರುತಿಸಲಾಗಿದೆ.

ಸೆ.11ರಂದು ದಾಖಲಾಗಿದ್ದ ಕೊಲ್ಲೂರು ಠಾಣೆ ಅಪರಾಧ ಕ್ರಮಾಂಕ 56/2026ರಲ್ಲಿ ಬಿಎನ್‌ಎಸ್ ಕಲಂ 123, 109 ಜೊತೆಗೆ 3(5) ಅಡಿ ಪ್ರಕರಣ ದಾಖಲಾಗಿತ್ತು. ವಿಟ್ಟಲ್ ನಾಯಕ್ ಅವರ ಪತ್ನಿಗೆ ಇಂಜೆಕ್ಷನ್‌ಗಳನ್ನು ನೀಡಿ ವಿಷಪ್ರಾಶನಗೊಳಿಸಿ ಕೊಲೆ ಮಾಡಲು ಯತ್ನಿಸಿದ ಆರೋಪದಲ್ಲಿ ಇಬ್ಬರೂ ಆರೋಪಿಗಳಾಗಿದ್ದರು. ಭವ್ಯಾ ಅವರು ವಿಟ್ಟಲ್ ನಾಯಕ್ ಅವರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು ಎಂಬ ಆರೋಪವೂ ಪ್ರಕರಣದಲ್ಲಿತ್ತು.

ಇಬ್ಬರೂ ಕೆಲವು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ SOCO ತಂಡ ತೆರಳಿ ಪರಿಶೀಲನೆ ನಡೆಸುತ್ತಿದೆ. ಹೆಚ್ಚಿನ ತನಿಖೆ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!