ಪಡುಕುಡೂರು : ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಪ್ರಯುಕ್ತ ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ.ಅಧಿಕಾರಿ ಪುತ್ಥಳಿಗೆ ಮಾಲಾರ್ಪಣೆ ಮಾಲಾರ್ಪಣೆ ಮಾಡಿ ಗೌರವಿಸಲಾಯಿತು. ಸ್ಥಳೀಯ ಪ್ರಮುಖರಾದ ಚಂದ್ರಶೇಖರ ಶೆಟ್ಟಿಗಾರ್, ಉದಯ ಪೂಜಾರಿ ತಿಮ್ಮೊಟ್ಟು, ಶಾಲಾ ಮುಖ್ಯ ಶಿಕ್ಷಕ ಹರೀಶ ಪೂಜಾರಿ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಶಿಕ್ಷಕಿಯರು, ಸ್ಥಳೀಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



