ಹೆಬ್ರಿ : ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಎನ್ ಎಸ್ ಎಸ್ ಸ್ವಯಂಸೇವಕರು 72ನೇ ವನ್ಯಜೀವ ಸಪ್ತಾಹದ ಅಂಗವಾಗಿ ಸೋಮೇಶ್ವರ ವನ್ಯಜೀವಿ ವಲಯ ಆಯೋಜಿಸಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ವಲಯ ಅಧಿಕಾರಿ ಮಂಜುನಾಥ ಗಾಣಿಗ ವಿದ್ಯಾರ್ಥಿಗಳಿಗೆ ಸ್ವಚ್ಛತೆ ಅರಿವು ಮೂಡಿ ಸುತ್ತ ಪ್ಲಾಸ್ಟಿಕ್ ತ್ಯಾಜ್ಯಗಳು ನೀರಿನ ಮೂಲಗಳನ್ನು ಸೇರಿ ಪರಿಸರಕ್ಕೆ ಆಗುವ ನಾಶದ ಬಗ್ಗೆ ವಿವರಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ. ವಿದ್ಯಾಧರ ಹೆಗ್ಡೆ ಎಸ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾಲೇಜಿನ ಎನ್ಎಸ್ಎಸ್ ಯೋಜನಾಧಿಕಾರಿ ಪ್ರವೀಣ ಶೆಟ್ಟಿ, ಸ್ವಯಂಸೇವಕರು ಹಾಗೂ ಸೋಮೇಶ್ವರ ವನ್ಯಜೀವಿ ವಲಯದ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.



