ಕೊಲ್ಲೂರು ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಅವರಿಗೆ ಕರ್ಣಾಟನಾಡ ಪೋಷಕ ಪ್ರಶಸ್ತಿ.
ಮುದ್ರಾಡಿ : ಮುದ್ರಾಡಿ ನಾಟ್ಕದೂರು ನಮ ತುಳುವೆರ್ ಕಲಾ ಸಂಘಟನೆಯ ವತಿಯಿಂದ ಮುದ್ರಾಡಿ ಶ್ರೀ ಆದಿಶಕ್ತಿ ದೇವಸ್ಥಾನದಲ್ಲಿ ನಡೆಯುವ 26ನೇ ನವ ರಂಗೋತ್ಸವದಲ್ಲಿ ನೀಡುವ ಕರ್ಣಾಟನಾಡ ಪೋಷಕ ಪ್ರಶಸ್ತಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿಪ್ರಶಾಂತ್ ಕುಮಾರ್ ಶೆಟ್ಟಿ ಅವರಿಗೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮುದ್ರಾಡಿ ನಾಟ್ಕದೂರು ನಮ ತುಳುವೆರ್ ಕಲಾ ಸಂಘಟನೆಯ ಅಧ್ಯಕ್ಷ ಧರ್ಮದರ್ಶಿ ವಿಜಯಕೀರ್ತಿ ಸುಕುಮಾರ ಮೋಹನ್ ತಿಳಿಸಿದ್ದಾರೆ.ಹೆಬ್ರಿ ಮೂಲದವರಾದ ಸೇರಿದ ಪ್ರಶಾಂತ್ ಕುಮಾರ್ ಶೆಟ್ಟಿಯವರು ಹಿಂದೂ ಧರ್ಮದಾಯ ಧತ್ತಿ ಮತ್ತು ಮುಜರಾಯಿ ಇಲಾಖೆಗೆ ಸೇವೆಗೆ ಸೇರಿ ವಿವಿಧ ಹುದ್ದೆಯಲ್ಲಿ ಸೇವೆ ಸಲ್ಲಿಸಿ ಮುಜರಾಯಿ ಇಲಾಖೆಯ ತಹಶೀಲ್ಧಾರ್ ಆಗಿ ಬಳಿಕ ಸಹಾಯಕ ಕಮೀಷನರ್ ಆಗಿ ಸೇವೆಯನ್ನು ಸಲ್ಲಿಸಿದ್ದಾರೆ.ಪ್ರಸ್ತುತ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿಯಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.



