Sunday, October 18, 2026
Homeಪ್ರಮುಖ ಸುದ್ದಿಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ.

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ.

ಸುಧಾ ಯಾದವ್‌ ಕರ್ನಾಟಕದ 2ನೇ ಮಹಿಳಾ ರಾಜ್ಯಪಾಲರು.

ಕರ್ನಾಟಕ ಸೇರಿದಂತೆ 6 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ಭವನ ಆದೇಶ ಹೊರಡಿಸಿದೆ. ಕರ್ನಾಟಕದ ನೂತನ ರಾಜ್ಯಪಾಲರಾಗಿ ಮಾಜಿ ಸಂಸದೆ ಸುಧಾ ಯಾದವ್ ಅವರನ್ನು ನೇಮಕ ಮಾಡಲಾಗಿದೆ. ಇವರು ಕರ್ನಾಟಕಕ್ಕೆ ೨ನೇ ಮಹಿಳಾ ರಾಜ್ಯಪಾಲರಾಗಿದ್ದಾರೆ. ಈ ಹಿಂದೆ 1999ರಿಂದ 2002ರವರೆಗೆ ವಿ.ಎಸ್ ರಮಾದೇವಿ ಅವರು ಕರ್ನಾಟಕದ ಮೊದಲ ಮಹಿಳಾ ರಾಜ್ಯಪಾಲರಾಗಿದ್ದರು.

ಇನ್ನು ಸಿಕ್ಕಿಂನ ರಾಜ್ಯಪಾಲರಾದ ಓಂ ಪ್ರಕಾಶ್ ಮಾಥುರ್ ಅವರನ್ನು ಕೇರಳದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಕೇರಳದ ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ತಮಿಳುನಾಡಿನ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!