ಹೆಬ್ರಿ : ಹೆಬ್ರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಅಕ್ರಮ ನಡೆದಿರುವುದು ನ್ಯಾಯಲಯದಲ್ಲಿ ಸಾಬೀತುಗೊಂಡು ಆಡಳಿತ ಮಂಡಳಿ ರದ್ದುಗೊಂಡ ಹಿನ್ನಲೆಯಲ್ಲಿ ಸಹಕಾರಿ ಇಲಾಖೆಯ ಅಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್ ಇತ್ತೀಚೆಗೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಆಡಳಿತ ಮಂಡಳಿ ರದ್ದುಗೊಂಡ ಹಿನ್ನಲೆಯಲ್ಲಿ ಶೀಘ್ರದಲ್ಲಿ ಮರು ಚುನಾವಣೆ ನಡೆಯಲಿದ್ದು ಪೂರ್ವ ಸಿದ್ಧತೆಗಳು ನಡೆಯುತ್ತಿವೆ ಎಂದು ಹೆಬ್ರಿ ಡೈರಿ ಮೂಲಗಳು ತಿಳಿಸಿವೆ.



