ಹೆಬ್ರಿ : ನವರಾತ್ರಿ ಮಹೋತ್ಸವದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಹೆಬ್ರಿ ಯೋಜನಾ ಕಛೇರಿಯಲ್ಲಿ ಗುರುವಾರ ಗಣಹೋಮ, ಲಕ್ಷ್ಮೀ ಪೂಜೆ ಮತ್ತು ಆಯುಧ ಪೂಜೆಯನ್ನು ನೆರವೇರಿಸಲಾಯಿತು. ವೇದಮೂರ್ತಿ ಹೆಬ್ರಿ ನಾಗರಾಜ ಜೋಯಿಸ್ ಧಾರ್ಮಿಕ ವಿಧಿವಿಧಾನವನ್ನು ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಸಂಸ್ಥೆಯ ಅಭಿವೃದ್ಧಿ ಹಾಗೂ ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸರ್ವರ ಕಲ್ಯಾಣ ದೂರೆಯಲು ಪ್ರಾರ್ಥಿಸಲಾಯಿತು. ಕಾರ್ಯಕ್ರಮದಲ್ಲಿ ಹೆಬ್ರಿ ತಾಲ್ಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ವಾದಿರಾಜ ಶೆಟ್ಟಿ, ಹೆಬ್ರಿ ವಲಯದ ಜನಜಾಗೃತಿ ವೇದಿಕೆಯ ಅಧ್ಯಕ್ಷ ವಿಠ್ಠಲ ಶೆಟ್ಟಿ, ಜನಜಾಗೃತಿ ವೇದಿಕೆಯ ಸದಸ್ಯರುಗಳು, ವಲಯದ ಅಧ್ಯಕ್ಷರು, ಗಣ್ಯರು, ತಾಲ್ಲೂಕು ಯೋಜನಾಧಿಕಾರಿಗಳು, ಹಾಗೂ ಎಲ್ಲಾ ವಿಭಾಗದ ಸಿಬ್ಬಂದಿಗಳು ಭಾಗವಹಿಸಿದ್ದರು.





