ನೂತನ ಬಾಲವನಕ್ಕೆ ಶಿಲಾನ್ಯಾಸ.
ಪಡುಕುಡೂರು ಚಿಕ್ಕಮಾರಬೆಟ್ಟು ಬಾಲಕೃಷ್ಣ ಶೆಟ್ಟಿ ಶಿಲಾನ್ಯಾಸ ನೆರವೇರಿ ಶಿಲಾನ್ಯಾಸ ನೆರವೇರಿಸಿದರು.
ಹೆಬ್ರಿ : ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮದ ವಿವಿಧ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು ಗುರುವಾರ ನೂತನ ಬಾಲವನಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು. ಶಾಲೆಯ ಹಿರಿಯ ವಿದ್ಯಾರ್ಥಿ ಮುಂಬೈ ಉದ್ಯಮಿ ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಪಡುಕುಡೂರು ಚಿಕ್ಕಮಾರಬೆಟ್ಟು ಬಾಲಕೃಷ್ಣ ಶೆಟ್ಟಿ ಅವರು ಶಾಲೆಗೆ ನೂತನ ಬಾಲವನ ಕೊಡುಗೆಯಾಗಿ ನೀಡಿದ್ದು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಶಾಲೆಯ ಅಭಿವೃದ್ಧಿಗಾಗಿ ನಿರಂತರ ಸಹಕಾರ ನೀಡುವುದಾಗಿ ಬಾಲಕೃಷ್ಣ ಶೆಟ್ಟಿ ತಿಳಿಸಿದರು.

ಸೂರಿಮಣ್ಣು ಮಠದ ವಿದ್ವಾನ್ ರವಿರಾಜ್ ಉಪಾಧ್ಯಾಯ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಶಾಲೆಯ ಹಿರಿಯ ವಿದ್ಯಾರ್ಥಿ ಬೆಂಗಳೂರು ಉದ್ಯಮಿ ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಪಡುಕುಡೂರು ಮೇಲ್ಬೆಟ್ಟು ಕೃಷ್ಣ ಟಿ ಶೆಟ್ಟಿ, ನಿವೃತ್ತ ಮುಖ್ಯ ಶಿಕ್ಷಕರಾದ ಕೇಶವ ನಾಯಕ್, ಭುಜಂಗ ಶೆಟ್ಟಿ, ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಭಾರವಿ ಶೆಟ್ಟಿ, ಸಂಚಾಲಕ ಪ್ರಸನ್ನ ಶೆಟ್ಟಿ, ಪದಾಧಿಕಾರಿಗಳು, ಪ್ರಮುಖರು, ಸ್ಥಳೀಯ ಗಣ್ಯರು, ಹಳೆ ವಿದ್ಯಾರ್ಥಿಗಳು, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿ ಶೆಟ್ಟಿ, ಸದಸ್ಯರು, ಮುಖ್ಯ ಶಿಕ್ಷಕ ಹರೀಶ ಪೂಜಾರಿ ಎಸ್, ಶಿಕ್ಷಕಿಯರು, ವಿವಿಧ ಸಂಘಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.



