ಚಾರ : ಚಾರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಆಯೋಜಿಸಿದ ಪ್ರಥಮ ವರ್ಷದ ಚಾರ ಶಾರದೋತ್ಸವ- 2026 ಸಂಭ್ರಮದಲ್ಲಿ ಚಾರ ಗ್ರಾಮದ ವಿದ್ಯಾನಗರದಲ್ಲಿ ವಾಸ್ತವ್ಯವಿರುವ 2026 – 27ನೇ ಸಾಲಿನ ಡಾ. ಶಿವರಾಮ ಕಾರಂತ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಮಹೇಶ ಹೈಕಾಡಿ ಅವರಿಗೆ ಶಿಕ್ಷಣ ಕ್ಷೇತ್ರ, ಸಾಹಿತ್ಯ ಮತ್ತು ವಿವಿಧ ಸಂಘ ಸಂಸ್ಥೆಯ ಮೂಲಕ ಮಾಡಿದ ಚಟುವಟಿಕೆಗಳನ್ನು ಗುರುತಿಸಿ ಚಾರ ಶಾರದೋತ್ಸವ ಸಂಭ್ರಮದಲ್ಲಿ ಸನ್ಮಾನಿಸಲಾಯಿತು.
ಅವರು ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯ ಹೈಸ್ಕೂಲ್ ವಿಭಾಗದ ಉಪ ಮುಖ್ಯ ಶಿಕ್ಷಕರಾಗಿ ಕನ್ನಡ ಶಿಕ್ಷಕರಾಗಿ ಪ್ರಸ್ತುತ ಸೇವೆ ಸಲ್ಲಿಸುತ್ತಿದ್ದಾರೆ.



