ಉಡುಪಿ : ಮಕ್ಕಳು ಮತ್ತು ಯುವಜನರಲ್ಲಿರುವ ಕಲಾ ಪ್ರತಿಭೆ ಗುರುತಿಸಿ ಉತ್ತೇಜನ ನೀಡಲು ಮತ್ತು ಕಲಾ ನೈಪುಣ್ಯ ವೃದ್ಧಿಗೆ ಪೆÇ್ರೀತ್ಸಾಹಿಸಲು ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಕಲಾ ಪ್ರತಿಭೋತ್ಸವ ಏರ್ಪಡಿಸಲಾಗಿದ್ದು, ಅರ್ಜಿ ಆಹ್ವಾನಿಸಲಾಗಿದೆ.
ಬಾಲಪ್ರತಿಭೆ, ಕಿಶೋರ ಪ್ರತಿಭೆ, ಯುವಪ್ರತಿಭೆ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದವರನ್ನು ವಲಯಮಟ್ಟಕ್ಕೆ ಹಾಗೂ ವಲಯಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆ ಮಾಡಲಾಗುವುದು. ಜಿಲ್ಲಾ ಮತ್ತು ವಲಯಮಟ್ಟದಲ್ಲಿ ಯಾವುದೇ ನಗದು ಪುರಸ್ಕಾರ ಇರುವುದಿಲ್ಲ. ವಲಯ ಮತ್ತು ರಾಜ್ಯಮಟ್ಟದಲ್ಲಿ ಭಾಗವಹಿಸುವವರಿಗೆ ಪ್ರಯಾಣ ವೆಚ್ಚ ನೀಡಲಾಗುವುದು. ಬಾಲಪ್ರತಿಭೆ 8ರಿಂದ 14 ವರ್ಷ, ಕಿಶೋರ ಪ್ರತಿಭೆ 14ರಿಂದ 18 ವರ್ಷ, ಯುವಪ್ರತಿಭೆ 18 ವರ್ಷ ಹಾಗೂ 30 ವರ್ಷಕ್ಕಿಂತ ಕಡಿಮೆ ಇರಬೇಕು.
ಶಾಸ್ತ್ರೀಯ ನೃತ್ಯ, ಸುಗಮ ಸಂಗೀತ, ಚಿತ್ರಕಲೆ, ಜನಪದ ಗೀತೆ, ಹಿಂದೂಸ್ತಾನಿ ವಾದ್ಯ ಸಂಗೀತ, ಕರ್ನಾಟಕ ಶಾಸ್ತ್ರೀಯ ಸಂಗೀತ, ಆಶುಭಾಷಣ, ಸಮೂಹ ಸ್ಪರ್ಧೆಯಾಗಿ ನಾಟಕ ಮತ್ತು ಜನಪದ ನೃತ್ಯ ಇರಲಿದೆ. ವಿದ್ಯಾರ್ಥಿಗಳು ವಯೋಮಿತಿ ದೃಢೀಕರಣಕ್ಕಾಗಿ ಶಾಲೆಯಿಂದ ಪಡೆದ ಪ್ರಮಾಣ ಪತ್ರ ಸಲ್ಲಿಸಬೇಕು. ಇತರರು ಎಸ್ಎಸ್ಎಲ್ಸಿ ಅಂಕಪಟ್ಟಿ ಅಥವಾ ಸಕ್ಷಮ ಪ್ರಾಧಿಕಾರ ನೀಡುವ ಜನ್ಮ ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 26 ಕೊನೆಯ ದಿನ. ಅರ್ಜಿಯನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿ, ಡಾ.ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿನಗರ, ಅಲೆವೂರು ಗ್ರಾಮ, ಮಣಿಪಾಲ ಇವರಿಗೆ ಖುದ್ದಾಗಿ, ಅಂಚೆ ಅಥವಾ Email: kanndacultureudupi@gmail.com ಮೂಲಕ ಕಳುಹಿಸಬಹುದಾಗಿದೆ ಮತ್ತು ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ ದೂ:08202986168 ಹಾಗೂ ಮೊ: 9591475884 ಅನ್ನು ಸಂಪರ್ಕಿಸಬಹುದು.



