ಇಬ್ಬರು ಆರೋಪಿಗಳು ಮದ್ಯಪ್ರದೇಶದಲ್ಲಿ ಪೊಲೀಸರ ವಶಕ್ಕೆ
ಉಡುಪಿ : ಪ್ರದೀಪ್ ಪೂಜಾರಿ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮಧ್ಯಪ್ರದೇಶದಲ್ಲಿ ವಶಕ್ಕೆ ಪಡೆಯಲಾಗಿದೆ.
ಮಧ್ಯಪ್ರದೇಶದಿಂದ ಆರೋಪಿಗಳನ್ನು ಉಡುಪಿಗೆ ಕರೆತರಲಾಗುತ್ತಿದ್ದು, ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಅಧಿಕೃತವಾಗಿ ಬಂಧಿಸಿದ ಬಳಿಕ ಆರೋಪಿಗಳ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ತಿಳಿದುಬಂದಿದೆ.



