Saturday, November 7, 2026
Homeಹೆಬ್ರಿ ಗ್ರಾಮ ಪಂಚಾಯತ್‌ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನ ಸಮಿತಿ ಉದ್ಘಾಟನೆ

ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನ ಸಮಿತಿ ಉದ್ಘಾಟನೆ

ಹೆಬ್ರಿ : ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನ ಸಮಿತಿ ಉದ್ಘಾಟನೆ ಇತ್ತೀಚೆಗೆ ನೆರವೇರಿತು. ಕಾರ್ಯಕ್ರಮವನ್ನು ಉದ್ಯಮಿ ಗುಡ್ಡಿ ಸುಧಾಕರ ಹೆಗ್ಡೆ ಉದ್ಘಾಟಿಸಿ ತಮ್ಮ ವಿದ್ಯಾರ್ಥಿ ಜೀವನದ ಅನುಭವಗಳನ್ನು ಹಂಚಿಕೊಳ್ಳುತ್ತ ನಾಯಕತ್ವ ಎನ್ನುವುದು ಕಾಲಕ್ಕೆ ತಕ್ಕ ಹಾಗೆ ಅದರ ಅರ್ಥವನ್ನು ಬದಲಾಯಿಸಿಕೊಂಡಿದೆ. ನಾಯಕನಾದವನು ದರ್ಪವನ್ನು ತೋರಿಸದೆ ಎಲ್ಲರ ಜೊತೆಗೆ ಬೆರೆತು ತಾನು ಕೆಲಸ ಮಾಡಿದಾಗ ಮಾತ್ರ ಯಶಸ್ವಿ ಕಾಣಲು ಸಾಧ್ಯ ಎಂದು ಹೇಳಿದರು.

ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಅರುಣ್ ಶೆಟ್ಟಿ  ಶೈಕ್ಷಣಿಕ ಸಾಧನೆ ಮಾಡಿದ ಕಾಲೇಜಿನ ವಿದ್ಯಾರ್ಥಿಗಳಿಗೆ ದೊಡ್ಡ ಮೊತ್ತದ ಪ್ರೋತ್ಸಾಹ ಧನವನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲಡಾ. ವಿದ್ಯಾಧರ ಹೆಗ್ಡೆ ಎಸ್ ಕಾಲೇಜಿನ ಸಾಧನೆಗಳ ಜೊತೆಗೆ ವಸ್ತು ಸ್ಥಿತಿಯ ವಿವರಣೆಯನ್ನು ನೀಡಿ, ಕಾಲೇಜು ಇನ್ನಷ್ಟು ಅಭಿವೃದ್ಧಿ ಹೊಂದಲು ಊರಗಣ್ಯರ, ಪೋಷಕರ,  ಕಾಲೇಜು ಅಭಿವೃದ್ಧಿ ಸಮಿತಿಯ ಸಹಕಾರದ ಅಗತ್ಯವಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ರಾಮಕೃಷ್ಣ ಭಟ್, ಶಾಮಲಾ ವಿಠಲ ಶೆಟ್ಟಿ, ಜನಾರ್ಧನ್ ಎಚ್, ಶಶಿಧರ ಶೆಣೈ, ಹೆಬ್ರಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಶಂಕರ ಸೇರಿಗಾರ್, ಪೋಷಕರ ವೇದಿಕೆ ಅಧ್ಯಕ್ಷೆ ಪ್ರಿಯದರ್ಶಿನಿ ಉಪಸ್ಥಿತರಿದ್ದರು.

ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿಯ ಸಂಚಾಲಕಿ ಸುಷ್ಮಾ ರಾವ್ ಕೆ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಸಹಪಾಧ್ಯಾಪಕ ಡಾ. ಮೇವಿ ಮಿರಾಂಡ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಭೋದಿಸಿದರು.

ಐಕ್ಯೂಎಸಿ  ಸಂಚಾಲಕ ಡಾ. ಗಣೇಶ್ ಎಸ್, ಸಾಂಸ್ಕೃತಿಕ ವೇದಿಕೆಯ ಸಂಚಾಲಕಿ ಜ್ಯೋತಿ, ವಿದ್ಯಾರ್ಥಿ ವೇದಿಕೆಯ ಅಧ್ಯಕ್ಷ ಪವನ್, ಜೊತೆ ಕಾರ್ಯದರ್ಶಿ ಪ್ರಸನ್ನ, ಸಾಂಸ್ಕೃತಿಕ ವೇದಿಕೆಯ ಕಾರ್ಯದರ್ಶಿ ದೀಕ್ಷಿತ ಉಪಸ್ಥಿತರಿದ್ದರು. ಉಪಾಧ್ಯಕ್ಷೆ ಸಂಗೀತ ಡಿ ಎಂ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿ ವೇದಿಕೆಯ ಕಾರ್ಯದರ್ಶಿ ಆಕರ್ಶ್ ವಂದಿಸಿದರು.

ಅಕ್ಷತಾ ಹಾಗೂ ಪ್ರಜ್ಞ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನಡೆಯಿತು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!