Sunday, November 8, 2026
Homeಪ್ರಮುಖ ಸುದ್ದಿಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ ಪ್ರದೀಪ್ ಪೂಜಾರಿ

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ ಪ್ರದೀಪ್ ಪೂಜಾರಿ

ಉಡುಪಿ : ಪೆರ್ಡೂರಿನ ಪ್ರದೀಪ್ ಪೂಜಾರಿ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಅ.28ರಂದು ಹಲ್ಲೆಗೆ ಒಳಗಾಗಿದ್ದ ಪ್ರದೀಪ್ ಪೂಜಾರಿ ಒಳರೋಗಿಯಾಗಿ ದಾಖಲಾದ ಅಜ್ಜರಕಾಡು ಆಸ್ಪತ್ರೆಯ ಬಾತ್‌ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಹಲ್ಲೆ ಮತ್ತು ಆತ್ಮಹತ್ಯೆ ಪ್ರಚೋದನೆ ಪ್ರಕರಣಗಳು ದಾಖಲಾಗಿದ್ದವು.

ಈ ಪ್ರಕರಣದ ತನಿಖೆ ಮಣಿಪಾಲ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ನಡೆಯುತ್ತಿದ್ದು, ಖಚಿತ ಮಾಹಿತಿಯಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಮಧ್ಯಪ್ರದೇಶದಲ್ಲಿ ವಶಕ್ಕೆ ಪಡೆದು ಬಳಿಕ ಬಂಧಿಸಿದ್ದರು.

ಇದೀಗ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಬಗ್ಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ನಾಲ್ಕಕ್ಕೇರಿದೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!