Wednesday, September 23, 2026
Homeಹೆಬ್ರಿಹೆಬ್ರಿ ಗೋಪಾಲ ಭಂಡಾರಿ 75ನೇ ಜನ್ಮದಿನಾಚರಣೆ : ಸಮಾಲೋಚನಾ ಸಭೆ

ಹೆಬ್ರಿ ಗೋಪಾಲ ಭಂಡಾರಿ 75ನೇ ಜನ್ಮದಿನಾಚರಣೆ : ಸಮಾಲೋಚನಾ ಸಭೆ

ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ ಸಾಮಾಜಿಕ ಸೇವಾ ಟ್ರಸ್ಟ್‌ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ಸಮಾಲೋಚನಾ ಸಭೆ ನಡೆಯಿತು.

ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ ಸಾಮಾಜಿಕ ಸೇವಾ ಟ್ರಸ್ಟ್‌ ವತಿಯಿಂದ ಜುಲೈ 7 ರಂದು ಕಾರ್ಕಳದ ಶಾಸಕರಾಗಿದ್ದ ದಿವಂಗತ ಹೆಬ್ರಿ ಗೋಪಾಲ ಭಂಡಾರಿಯವರ 75ನೇ ವರ್ಷದ ಜನ್ಮದಿನಾಚರಣೆಯ ಪ್ರಯುಕ್ತ ನಡೆಯುವ ವಿವಿಧ ಸಾಧಕರ ಸನ್ಮಾನ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮದ ಸಮಾಲೋಚನಾ ಸಭೆಯು ಭಾನುವಾರ ನಡೆಯಿತು.

ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ ಸಾಮಾಜಿಕ ಸೇವಾ ಟ್ರಸ್ಟ್‌ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ ಟ್ರಸ್ಟ್‌ ವತಿಯಿಂದ ನಡೆಯುವ ಜನ್ಮದಿನಾಚರಣೆ ಮತ್ತು ವಿವಿಧ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಯಿತು. ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ ಸಾಮಾಜಿಕ ಸೇವಾ ಟ್ರಸ್ಟ್‌ ವತಿಯಿಂದ ಶಾಶ್ವತ ಯೋಜನೆಯನ್ನು ರೂಪಿಸುವ ಬಗ್ಗೆ ಚರ್ಚಿಸಲಾಯಿತು. ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ ಸಾಮಾಜಿಕ ಸೇವಾ ಟ್ರಸ್ಟ್‌ ಪ್ರಧಾನ ಕಾರ್ಯದರ್ಶಿ ದೀಪಾ ಭಂಡಾರಿ, ಕೋಶಾಧಿಕಾರಿ ಎಚ್.ಜನಾರ್ಧನ್‌, ನಿರ್ದೇಶಕರಾದ ವಾದಿರಾಜ ಶೆಟ್ಟಿ ಹೆಬ್ರಿ, ರಾಜೇಶ ಭಂಡಾರಿ, ಮೂರ್ಸಾಲು ಮೋಹನದಾಸ ನಾಯಕ್‌ ಶಿವಪುರ, ಬೈಕಾಡಿ ಮಂಜುನಾಥ ರಾವ್‌ ಶಿವಪುರ, ಜಗನ್ನಾಥ ಕುಲಾಲ್‌, ಸುಕುಮಾರ್‌ ಮುನಿಯಾಲ್‌, ಗೋಪಾಲ ಭಂಡಾರಿಯವರ ಪುತ್ರ ಪ್ರದೀಪ್‌ ಭಂಡಾರಿ, ಅಳಿಯ ಶ್ವೇತ ಕುಮಾರ್‌ ಮುಂತಾದವರು ಉಪಸ್ಥಿತರಿದ್ದರು. ಎಚ್.‌ ಜನಾರ್ಧನ್‌ ವಂದಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!