Sunday, August 9, 2026
Homeಮುದ್ರಾಡಿ ಗ್ರಾಮ ಪಂಚಾಯತ್‌ಮುದ್ರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ : ಶಾಲಾ ಮಂತ್ರಿಮಂಡಲದ ಉದ್ಘಾಟನೆ.

ಮುದ್ರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ : ಶಾಲಾ ಮಂತ್ರಿಮಂಡಲದ ಉದ್ಘಾಟನೆ.

ಮುದ್ರಾಡಿ : ಮುದ್ರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2026-2027 ನೇ ಸಾಲಿನ ಶಾಲಾ ಮಂತ್ರಿಮಂಡಲದ ಉದ್ಘಾಟನೆ ಇತ್ತೀಚೆಗೆ ಜರುಗಿತು.

ಉದ್ಘಾಟನೆಯನ್ನು ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ರಾಮ ಸೇರಿಗಾರ್ ನೆರವೇರಿಸಿದರು.

ಸಭೆಯ ಅಧ್ಯಕ್ಷತೆಯನ್ನು ಎಸ್ ಡಿಎಂಸಿ ಅಧ್ಯಕ್ಷ ಪ್ರಸನ್ನ ಕುಮಾರ್ ಅಧ್ಯಕ್ಷತೆಯನ್ನು ವಹಿಸಿದ್ದರು. ಶಾಲಾ ನಾಯಕ ಸಮೃದ್ಧ ವಿ. ಶೆಟ್ಟಿಗಾರ್, ಮುಖ್ಯ ಶಿಕ್ಷಕ ನಾರಾಯಣ, ನಿವೃತ್ತ ಶಿಕ್ಷಕ ಗಣಪತಿ ಎಂ. ಉಪಾಧ್ಯಕ್ಷೆ ಸುರೇಖಾ ಶೆಟ್ಟಿ, ಶಿಕ್ಷಕರು, ವಿದ್ಯಾರ್ಥಿಗಳು, ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು. ಶಿಕ್ಷಕ ಶ್ರಿನಿವಾಸ ಭಂಡಾರಿ ಮುದ್ದೂರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಮುಖ್ಯಶಿಕ್ಷಕ ನಾರಾಯಣ ಸ್ವಾಗತಿಸಿದರು. ಸತೀಶ ಬೇಳಂಜೆ ನಿರೂಪಿಸಿದರು ವಿಜಯ ಕಿಣಿ ವಂದಿಸಿದರು.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments